BIG NEWS: ರಾಜ್ಯದಲ್ಲಿ ಆನ್​ಲೈನ್ ಗೇಮಿಂಗ್​ಗೆ ಗ್ರೀನ್ ಸಿಗ್ನಲ್; ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ರಾಜ್ಯದಲ್ಲಿ ಆನ್​ಲೈನ್​ ಗೇಮಿಂಗ್​ಗೆ ಇಂದು ಹೈಕೋರ್ಟ್​ ಗ್ರೀನ್ ಸಿಗ್ನಲ್ ನೀಡಿ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದು ಆನ್‌ಲೈನ್ ಗೇಮಿಂಗ್ ಅನ್ನು ರಾಜ್ಯದಲ್ಲಿ ನಿಷೇದ ಮಾಡಲಾಗಿತ್ತು. ಇನ್ನು, ಆನ್​ಲೈನ್…

ಬೆಂಗಳೂರು: ರಾಜ್ಯದಲ್ಲಿ ಆನ್​ಲೈನ್​ ಗೇಮಿಂಗ್​ಗೆ ಇಂದು ಹೈಕೋರ್ಟ್​ ಗ್ರೀನ್ ಸಿಗ್ನಲ್ ನೀಡಿ ಮಹತ್ವದ ಆದೇಶ ಹೊರಡಿಸಿದೆ.

ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದು ಆನ್‌ಲೈನ್ ಗೇಮಿಂಗ್ ಅನ್ನು ರಾಜ್ಯದಲ್ಲಿ ನಿಷೇದ ಮಾಡಲಾಗಿತ್ತು. ಇನ್ನು, ಆನ್​ಲೈನ್ ಗೇಮಿಂಗ್​ ನಿಷೇಧ ಕುರಿತು ಗೇಮಿಂಗ್ ಕಂಪನಿಗಳು ಕೋರ್ಟ್​ಗೆ ತಕರಾರು ಅರ್ಜಿ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ​ ಸರ್ಕಾರದ ಆದೇಶವನ್ನು ರದ್ದು ಪಡಿಸಿದೆ.

ಹೌದು, ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುತಾರಾಜ್ ಅವಸ್ಥಿ ಮತ್ತು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ 2021ರ ಡಿ. 22ರಂದು ವಿಚಾರಣೆ ಪೂರ್ಣಗೊಳಿಸಿ, ಸರ್ಕಾರದ ಕ್ರಮ ಸಂವಿಧಾನ ಬದ್ಧವಾಗಿಲ್ಲವೆಂದು ಹೇಳಿದ್ದು, ಆನ್​ಲೈನ್​ ಗೇಮಿಂಗ್ ನಿಷೇಧ ಆದೇಶ ಕಾನೂನುಬಾಹಿರವಾಗಿದ್ದು, ಈ ಸಂಬಂಧ ಗೇಮಿಂಗ್ ಸಂಸ್ಥೆಗಳ ವಿರುದ್ಧ ಸರ್ಕಾರ ಯಾವ ರೀತಿಯ ಕ್ರಮಗಳನ್ನೂ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.