ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವ ಪಡಿತರ ಚೀಟಿದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ 5 ಕೆಜಿ ಧಾನ್ಯವನ್ನು ಪ್ರತಿ ತಿಂಗಳು ಹಂಚಲಾಗುತ್ತಿದ್ದು, ಏಪ್ರಿಲ್ 1ರಿಂದ ಜಾರಿಯಾಗುವಂತೆ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಇಂದು ಘೋಷಣೆ ಮಾಡಿದ್ದಾರೆ.
ಹೌದು, ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು, ಪ್ರಸ್ತುತ ಬಿಪಿಎಲ್ ಕುಟುಂಬಗಳಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದ್ದು, ಇನ್ನು ಮುಂದೆ ಹೆಚ್ಚುವರಿಯಾಗಿ ಒಂದು ಕೆಜಿ ನೀಡಲಾಗುವುದು ಎಂದು ತಿಳಿಸಿದರು.
ಇನ್ನು, ನಿನ್ನೆ (ಫೆಬ್ರುವರಿ 14) ಆರಂಭವಾದ ವಿಧಾನಮಂಡಲ ಅಧಿವೇಶನ ಫೆಬ್ರುವರಿ 25ರ ವರೆಗೆ ನಡೆಯಲಿದೆ.