ದಾವಣಗೆರೆ: ಜಿಲ್ಲೆಯಾದ್ಯಂತ ಫೆ.19 ರವರೆಗೆ ನಿಷೇಧಾಜ್ಞೆ ಜಾರಿ

ದಾವಣಗೆರೆ ಫೆ. 15: ಜಿಲ್ಲೆಯಲ್ಲಿ ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಾವಣಗೆರೆ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಫೆ. 16 ರಂದು ಬೆಳಿಗ್ಗೆ…

Prohibition vijayaprabha news

ದಾವಣಗೆರೆ ಫೆ. 15: ಜಿಲ್ಲೆಯಲ್ಲಿ ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಾವಣಗೆರೆ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಫೆ. 16 ರಂದು ಬೆಳಿಗ್ಗೆ 06 ಗಂಟೆಯಿಂದ ಫೆ. 19 ರಂದು ಸಂಜೆ 06 ಗಂಟೆಯವರೆಗೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆದೇಶ ಹೊರಡಿಸಿದ್ದಾರೆ.

ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರೆದಿದ್ದು, ನ್ಯಾಯಾಲಯವು ಈಗಾಗಲೆ ಮಧ್ಯಂತರ ತೀರ್ಪು ನೀಡಿದೆ. ಫೆ.15 ರಿಂದ 09 ಮತ್ತು 10 ನೇ ತರಗತಿಗಳು ಆರಂಭಗೊಂಡಿದ್ದು ಫೆ. 16 ರಿಂದ ಪದವಿ ಪೂರ್ವ, ಪದವಿ, ಇಂಜಿನಿಯರಿಂಗ್, ವಿಶ್ವವಿದ್ಯಾಲಯ, ಮೆಡಿಕಲ್ ಸೇರಿದಂತೆ ಎಲ್ಲ ತರಗತಿಗಳು ಆರಂಭವಾಗಲಿದ್ದು ಜಿಲ್ಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಫೆ. 16 ರಂದು ಬೆಳಿಗ್ಗೆ 06 ಗಂಟೆಯಿಂದ ಫೆ. 19 ರಂದು ಸಂಜೆ 06 ಗಂಟೆಯವರೆಗೆ ಜಾರಿಗೊಳಿಸಲಾಗಿದೆ.

ನಿಷೇಧಾಜ್ಞೆ ಅನ್ವಯ ಯಾವುದೇ ಧರ್ಮದ, ಅಥವಾ ಯಾವುದೇ ಸಂಘಟನೆಗಳ ಮುಖಂಡರುಗಳು ಮತ್ತು ನಾಯಕರುಗಳು ಶಾಲಾ ಕಾಲೇಜುಗಳ ಆವರಣದೊಳಗೆ ಪ್ರವೇಶಿಸುವುದನ್ನುನಿಷೇದಿಸಲಾಗಿದೆ. ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಅಥವಾ ಶಿಕ್ಷಕಿಯರು ಮತ್ತು ಕಾಲೇಜು ಸಿಬ್ಬಂದಿಗಳು ಹೊರತುಪಡಿಸಿ ಅನಿವಾರ್ಯ ಸಂದರ್ಭಗಳಲ್ಲಿ ಪೋಷಕರಿಗೆ ಮಾತ್ರ ಪ್ರವೇಶಿಸಲು ಅವಕಾಶವಿರುತ್ತದೆ.

Vijayaprabha Mobile App free

ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಟಿಯಿಂದ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್‍ಗಳ ಬಳಕೆಯನ್ನು ನಿಷೇದಿಸಲಾಗಿದ್ದು, ಕಾನೂನು ಭಂಗ ಉಂಟುಮಾಡುವ ಉದ್ದೇಶದಿಂದ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿರ್ಬಂದಿಸಲಾಗಿದ್ದು, ಯಾವುದೇ ಮೆರವಣಿಗೆ ಮತ್ತು ಸಭೆ ಸಮಾರಂಭಗಳನ್ನು ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶಗಳನ್ನು ನಿಷೇಧಿಸಿದೆ.

ಶಸ್ತ್ರಗಳನ್ನು, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಇಟ್ಟಿಗೆ, ಚಾಕು ಇನ್ನು ಮುಂತಾದ ಮಾರಾಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆ ಉಂಟುಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ಅಥವಾ ಶೇಖರಿಸುವುದನ್ನು ನಿಷೇಧಿಸಿದೆ. ಯಾವುದೇ ಸ್ಫೋಟಕ ವಸ್ತುಗಳನ್ನು (ಪಟಾಕಿ/ಸಿಡಿಮದ್ದು) ಬಳಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು, ಎಸೆಯುವ ಸಾಧನಗಳನ್ನು ಅಥವಾ ಉಪಕರಣಗಳ ಒಯ್ಯುವಿಕೆ ಮತ್ತು ಶೇಖರಿಸುವುದನ್ನು ನಿಷೇಧಿಸಿದೆ.

ಯಾವುದೇ ವ್ಯಕ್ತಿಗಳ ಅಥವಾ ಶವಗಳ ಪ್ರತಿಕೃತಿ ಪ್ರದರ್ಶನ ಮಾಡುವುದನ್ನು ಪ್ರಚೋದಿಸಬಹುದಾದಂತಹ ಬಹಿರಂಗ ಘೋಷಣೆಗಳನ್ನು ಕೂಗುವುದು ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು ಸಂಕೇತಗಳನ್ನು, ಭಿತ್ತಿಪತ್ರ ಅಥವಾ ಇತರ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಿದೆ.

ಯಾವುದೇ ಖಾಸಗಿ ಅಥವಾ ಸಾರ್ವಜನಿಕ ಆಸ್ತಿಗಳನ್ನು ಹಾನಿಗೊಳಿಸುವ ಮತ್ತು ವಿರೂಪಗೊಳಿಸುವ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಿಷೇಧಿಸಿದ್ದು, ಯಾವುದೇ ವ್ಯಕ್ತಿಯ ಜಾತಿ, ಧರ್ಮ, ಕೋಮು, ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಿಕತೆಗೆ ಬಾಧಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು ನಿಷೇಧಿಸಿದೆ.

ಸರ್ಕಾರಿ ಸಂಸ್ಥೆಗಳು ಅಥವಾ ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ನಿಂಧಿಸುವಂತಹ, ಅವಹೇಳನಕಾರಿಯಾದಂತಹ ಯಾವುದೇ ಭಾಷಣಗಳು ಪ್ರಕಟಣೆಗಳು, ಅವಾಚ್ಯ ಶಬ್ದಗಳ ಬಳಕೆ, ಘೋಷಣೆಗಳು, ಪ್ರಚೋದನಾಕಾರಿ ಭಾಷಣ ಅಥವಾ ಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿಡ್ಡಿ, ಈಗಾಗಲೇ ಸರ್ಕಾರ ಕಾರ್ಯಕ್ರಮಗಳು ನಿಗಧಿಯಾಗಿದಲ್ಲಿ ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೆ ಮುಂದುವರೆಯತಕ್ಕದ್ದಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.