ಸ್ಯಾಂಡಲ್ ವುಡ್ ಬ್ಯೂಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಒಂದೆಡೆ ದಕ್ಷಿಣದ ಸಿನಿಮಾಗಳಲ್ಲಿ ಇನ್ನೊಂದೆಡೆ ಬಾಲಿವುಡ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಅವರು ತೆಲುಗು ನಟ ವಿಜಯ್ ದೇವರಕೊಂಡ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹಬ್ಬಿದೆ. ಮುಂಬೈನಲ್ಲಿ ಇವರಿಬ್ಬರು ಸುತ್ತು ಹೊಡೆಯುತ್ತಿರುವ ಫೋಟೋಗಳು ಮತ್ತು ವಿಡಿಯೋಗಳು ವೈರಲ್ ಆಗಿವೆ. ಇದೇ ವಿಚಾರವಾಗಿ ರಶ್ಮಿ ಮಂದಣ್ಣ ಪ್ರತಿಕ್ರಿಯಿಸಿದ್ದು, ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹರಡಿರುವ ಸುದ್ದಿಗಳಲ್ಲಿ ಯಾವುದೇ ಸತ್ಯವಿಲ್ಲ ಎಂದು ಹೇಳಿದ್ದಾರೆ

ಇನ್ನು, ನೀವು ಮದುವೆಯಾಗಲು ಬಯಸುವ ವ್ಯಕ್ತಿ ಯಾವ ಗುಣಗಳನ್ನು ಹೊಂದಿರಬೇಕು? ಎಂಬ ಪ್ರಶ್ನೆಗೆ ಪ್ರತಿಕ್ರಿಸಿದ ರಶ್ಮಿಕಾ, ನನ್ನನ್ನು ಚೆನ್ನಾಗಿ ನೋಡಿಕೊಳ್ಳುವವರನ್ನು ನಾನು ಮದುವೆಯಾಗಲು ಬಯಸುತ್ತೇನೆ. ಆದರೆ ನಾನು ಇನ್ನೂ ಚಿಕ್ಕವಳಾಗಿದ್ದು, ಮದುವೆಯ ಬಗ್ಗೆ ಹೇಗೆ ಯೋಚಿಸಬೇಕೆಂದು ಸಹ ತಿಳಿದಿಲ್ಲ. ಹಾಗಾಗಿಯೇ ನನ್ನ ಮನಸ್ಸಿನಲ್ಲಿ ಮದುವೆಯಾಗುವ ಯೋಚನೆಯೇ ಇಲ್ಲ ” ಎಂದಿದ್ದಾರೆ.

ಕಳೆದ ವರ್ಷ ಪುಷ್ಪಾ ದಿ ರೈಸ್ ಚಿತ್ರದ ಮೂಲಕ ರಶ್ಮಿಕಾ ಪ್ಯಾನ್ ಇಂಡಿಯಾ ರೇಂಜ್ ನಾಯಕಿಯಾಗಿ ಹೆಸರು ಮಾಡಿದ್ದೂ, ಬಾಲಿವುಡ್‌ನಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ಮಿಷನ್ ಮಜನು ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಚಿತ್ರವೂ ಇದೇ ವರ್ಷದ ಕೊನೆಯಲ್ಲಿ ತೆರೆಕಾಣಲಿದೆ. ಇನ್ನು, ಅಮಿತಾಭ್ ಬಚ್ಚನ್ ಜೊತೆ ಗುಡ್ ಬೈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಮಿತಾಬ್ ಮಗಳ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.




