ವೈದ್ಯರ ನಿರ್ಲಕ್ಷ್ಯಕ್ಕೆ 2 ವರ್ಷದ ಕಂದಮ್ಮ ಬಲಿ!

ಹುಬ್ಬಳ್ಳಿ: ವೈದ್ಯರ ನಿರ್ಲಕ್ಷ್ಯಕ್ಕೆ ಎರಡು ವರ್ಷದ ಮಗು ಬಲಿಯಾಗಿದೆ ಎಂದು ಆರೋಪಿಸಿ ಮಗುವಿನ ಪಾಲಕರು, ಕುಟುಂಬಸ್ಥರು ಹುಬ್ಬಳ್ಳಿ ಕಿಮ್ಸ್​ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹೌದು, ಹುಬ್ಬಳ್ಳಿಯ ತಾಜ್ ನಗರದ 2 ವರ್ಷದ ರಕ್ಷಾ ಚೌಧರಿ ಮೃತ ದುರ್ದೈವಿಯಾಗಿದ್ದು,…

ಹುಬ್ಬಳ್ಳಿ: ವೈದ್ಯರ ನಿರ್ಲಕ್ಷ್ಯಕ್ಕೆ ಎರಡು ವರ್ಷದ ಮಗು ಬಲಿಯಾಗಿದೆ ಎಂದು ಆರೋಪಿಸಿ ಮಗುವಿನ ಪಾಲಕರು, ಕುಟುಂಬಸ್ಥರು ಹುಬ್ಬಳ್ಳಿ ಕಿಮ್ಸ್​ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಹೌದು, ಹುಬ್ಬಳ್ಳಿಯ ತಾಜ್ ನಗರದ 2 ವರ್ಷದ ರಕ್ಷಾ ಚೌಧರಿ ಮೃತ ದುರ್ದೈವಿಯಾಗಿದ್ದು, ಮಗುವಿನ ಬಾಯಿಯೊಳಗೆ ಸಣ್ಣ ಗಡ್ಡೆಯಾಗಿತ್ತು. ಚಿಕಿತ್ಸೆಗೆಂದು ಪಾಲಕರು ಮಗುವನ್ನು ಕಿಮ್ಸ್​ ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದು, ಪಾಲಕರ ಅನುಮತಿ ಪಡೆಯದೇ ವೈದ್ಯರು ಆಪರೇಷನ್ ಮಾಡಿದ್ದಾರೆ.

ಅಪರೇಷನ್ ಬಳಿಕ ಮಗುವಿಗೆ ತೀವ್ರ ರಕ್ತಸ್ರಾವವಾಗಿದ್ದು, ರಕ್ತಸ್ರಾವ ನಿಲ್ಲದ ಹಿನ್ನೆಲೆ‌ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದರು. ಅಲ್ಲಿಯೂ ರಕ್ತಸ್ರಾವ ನಿಲ್ಲದ ಹಿನ್ನೆಲೆ‌ ವಾಪಸ್ ಕಿಮ್ಸ್​ಗೆ ಕಳುಹಿಸಿದ್ದರು. ಕಿಮ್ಸ್​ಗೆ ಆಸ್ಪತ್ರೆಗೆ ವಾಪಸ್ ಬಂದ ಮೇಲೆ ಮಗು ಸಾವನ್ನಪ್ಪಿದೆ ಎಂದು ಪಾಲಕರು ಆರೋಪಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.