ಬೆಂಗಳೂರು: ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಚಿತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ರಾಬರ್ಟ್” ಸಿನಿಮಾದ ಟೀಸರ್ ಯೂಟ್ಯೂಬ್ ನಲ್ಲಿ ಸಕತ್ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ.
ಹೌದು ಚಿತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ರಾಬರ್ಟ್” ಸಿನಿಮಾದ ಟೀಸರ್ ಅನ್ನು ಇದೆ ವರ್ಷ ಫೆಬ್ರುವರಿಯಲ್ಲಿ ಬಿಡುಗಡೆ ಮಾಡಲಾಗಿತ್ತು. ಯೂಟ್ಯೂಬ್ ನಲ್ಲಿ “ರಾಬರ್ಟ್” ಸಿನಿಮಾ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದ್ದು, ಸುಮಾರು ೫೦ ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಟ್ವೀಟ್ ಮಾಡಿ “ರಾಬರ್ಟ್ ಚಿತ್ರದ ಟೀಸರ್ 5 ಮಿಲಿಯನ್ ವೀಕ್ಷಣೆಗೆ ಕಾರಣರಾದ ಪ್ರತಿಯೊಬ್ಬರಿಗೂ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ರಾಬರ್ಟ್ ಸಿನಿಮಾವನ್ನು ನಿರ್ದೇಶಕ ತರುಣ್ ಸುಧೀರ್ ನಿರ್ದೇಶನ ಮಾಡುತ್ತಿದ್ದು, ಉಮಪತಿ ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ನಟ ದರ್ಶನ್ ಸೇರಿದಂತೆ ನಟಿ ಆಶಾ ಭಟ್, ವಿನೋದ್ ಪ್ರಭಾಕರ್, ಜಗಪತಿ ಬಾಬು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾಕ್ಕೆಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಲಿದ್ದಾರೆ.
ಇದನ್ನು ಓದಿ: ತೆಲುಗು ಚಿತ್ರೋದ್ಯಮದ ಮೂವರಿಗೆ ‘ಸಹಾಯ ಹಸ್ತ’ ಚಾಚಿದ ಸೋನು ಸೂದ್!
ರಾಬರ್ಟ್ ಚಿತ್ರದ ಟೀಸರ್ 5Millon Views ಗೆ ಕಾರಣರಾದ ಪ್ರತಿಯೊಬ್ಬರಿಗೂ ನನ್ನ ತುಂಬು ಹೃದಯದ ಧನ್ಯವಾದಗಳು
ನಿಮ್ಮ ದಾಸ ದರ್ಶನ್@TharunSudhir @umap30071 @StarAshaBhat @aanandaaudio pic.twitter.com/ctQgoH0qfq— Darshan Thoogudeepa (@dasadarshan) October 8, 2020