ನಟ ಸುದೀಪ್‌ಗೆ ನಿಂದನೆ: ಸುದೀಪ್ ಬೆಂಬಲಕ್ಕೆ ನಿಂತ ವಾಣಿಜ್ಯ ಮಂಡಳಿ; ದೂರು ದಾಖಲು

ಬೆಂಗಳೂರು: ನಟ ಕಿಚ್ಚ ಸುದೀಪ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಕಳೆದ ಕೆಲವು ದಿನಗಳಿಂದ ವಾಕ್ಸಮರ ನಡೆಯುತ್ತಿದೆ. ಈಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಧ್ಯಪ್ರವೇಶಿಸಿದ್ದು, ಅವಹೇಳನಕಾರಿಯಾದ ಮಾತುಗಳನ್ನಾಡುತ್ತಿರುವ ಚರಣ್, ಅಹೋರಾತ್ರ ಎಂಬುವವರ ವಿರುದ್ಧ ಕ್ರಮಕ್ಕೆ…

Kiccha sudeepa vijayaprabha

ಬೆಂಗಳೂರು: ನಟ ಕಿಚ್ಚ ಸುದೀಪ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಕಳೆದ ಕೆಲವು ದಿನಗಳಿಂದ ವಾಕ್ಸಮರ ನಡೆಯುತ್ತಿದೆ. ಈಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಧ್ಯಪ್ರವೇಶಿಸಿದ್ದು, ಅವಹೇಳನಕಾರಿಯಾದ ಮಾತುಗಳನ್ನಾಡುತ್ತಿರುವ ಚರಣ್, ಅಹೋರಾತ್ರ ಎಂಬುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಚಲನಚಿತ್ರ ಮಂಡಳಿ ಅಧ್ಯಕ್ಷ ಭಾ.ಮ ಹರೀಶ್ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಆನ್‌ಲೈನ್ ಗೇಮ್‌ಗಳ ವಿಚಾರದಲ್ಲಿ ನಟ ಸುದೀಪ್ ಅವರ ವಿರುದ್ಧ ಚರಣ್ ಹಾಗೂ ಅಹೋರಾತ್ರಿ ಎಂಬುವವರು ಇತ್ತೀಚಿಗೆ ಹಲವು ಪೋಸ್ಟ್ ಹಾಕಿ ಅವಹೇಳನಕಾರಿಯಾಗಿ ಮಾತನಾಡಿದ್ದು, ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಕಿಚ್ಚನ ವರ್ಚಸ್ಸಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಲಾಗಿದ್ದು, ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.