ಮುಂಬೈ: ಮನಿ ಲಾಂಡರಿಂಗ್ ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಾಲಿವುಡ್ ನಟ ಹಾಗೂ ಉದ್ಯಮಿ ಸಚಿನ್ ಜೋಶಿ ಅವರನ್ನು ಭಾನುವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಇನ್ನು ಮನಿ ಲಾಂಡರಿಂಗ್ ಪ್ರಕರಣ ಪ್ರಕರಣದಲ್ಲಿ ಮುಂಬೈ ಮೂಲದ ಓಂಕಾರ್ ರಿಯಾಲ್ಟಿ ಗ್ರೂಪ್ ಒಳಗೊಂಡಿದೆ ಎನ್ನಲಾಗಿದ್ದು, ಸಂಸ್ಥೆಯ ವಿರುದ್ಧ ಅಕ್ರಮ ಹಣ ವರ್ಗಾವಣೆ ನಡೆಸಿದ ಆರೋಪವಿದೆ. ಮುಂಬೈ ಮಿರರ್, ಜಾಕ್ ಪಾಟ್ ಸೇರಿದಂತೆ ಕೆಲವು ತೆಲುಗು, ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಸಚಿನ್ ಜೋಶಿ, 2017ರಲ್ಲಿ ಮಲ್ಯ ಒಡೆತನದ ಗೋವಾದ ಕಿಂಗ್ ಫಿಷರ್ ಬಂಗಲೆಯನ್ನು ಖರೀದಿಸಿ ಬಾರಿ ಸುದ್ದಿಯಾಗಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.