ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಿರುತೆರೆ ನಟ ಚರಿತ್ ಅರೆಸ್ಟ್

ಬೆಂಗಳೂರು: ಖ್ಯಾತ ಕಿರುತೆರೆ ನಟ ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದೆ. ಈ ಸಂಬಂಧ ಅವರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ. ಈ ಪ್ರಕರಣದಲ್ಲಿ ಕಿರುತೆರೆ ನಟ ಚರಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

ಬೆಂಗಳೂರು: ಖ್ಯಾತ ಕಿರುತೆರೆ ನಟ ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದೆ. ಈ ಸಂಬಂಧ ಅವರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ. ಈ ಪ್ರಕರಣದಲ್ಲಿ ಕಿರುತೆರೆ ನಟ ಚರಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಕನ್ನಡದ ಮುದ್ದುಲಕ್ಷ್ಮೀ ಸೀರಿಯಲ್ ನಟ ಚರಿತ್ ಬಾಳಪ್ಪ ಅವರ ವಿರುದ್ಧ ಯುವತಿಯೊಬ್ಬಳು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ.

ಈ ಸಂಬಂಧ ದೂರು ನೀಡಿದ ಕಾರಣ, ನಟ ಚರಿತ್ ಬಾಳಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Vijayaprabha Mobile App free

ಇನ್ನು ಪರಿಚಯದ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣದ ದಾಖಲಾದ ನಂತ್ರ, ಚರಿತ್ ಬಾಳಪ್ಪ ಅವರನ್ನು ಆರ್ ಆರ್ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಚರಿತ್ ಬಾಳಪ್ಪ ಅವರು ಕನ್ನಡದ ಮುದ್ದುಲಕ್ಷ್ಮೀ ಸೀರಿಯಲ್ ಸೇರಿದಂತೆ ಇತರೆ ಧಾರವಾಹಿಗಳಲ್ಲಿ ನಟಿಸಿದ್ದಾರೆ. ಅಲ್ಲದೇ ತೆಲುಗಿನ ಕಿರುತೆರೆಯಲ್ಲೂ ನಟಿಸಿದ್ದಾರೆ.

ಅಂದಹಾಗೇ ಯುವತಿ ನೀಡಿರುವಂತ ದೂರಿನಲ್ಲಿ ಕಿರುತೆರೆ ನಟ ಚರಿತ್ ಬಾಳಪ್ಪ ಅವರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಅಲ್ಲದೇ ಕೊಲೆ ಬೆದರಿಕೆ ಹಾಕಿ, ಹಲ್ಲೆಗೂ ಯತ್ನಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.