Darshan bail : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಜೈಲಿನಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿಯ (bail application)ವಿಚಾರಣೆ ಇಂದು ನಡೆಯಲಿದೆ.
ಹೌದು, ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯ ದರ್ಶನ್ ಬೇಲ್ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ಸೆ. 21ರಂದೇ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ್ದ ನ್ಯಾಯಾಲಯ ಕಾಮಾಕ್ಷಿಪಾಳ್ಯ ಪೊಲೀಸರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ಹೀಗಾಗಿ ಕಾಮಾಕ್ಷಿಪಾಳ್ಯ ಠಾಣೆಯ ತನಿಖಾಧಿಕಾರಿಗಳು ಇಂದು ಆಕ್ಷೇಪಣೆ ಸಲ್ಲಿಸುವ ಸಾಧ್ಯತೆಯಿದೆ.
ಇದನ್ನೂ ಓದಿ: ಇಂದಿನ ಹವಾಮಾನ ವರದಿ; ರಾಜ್ಯದಲ್ಲಿ ಮೂರು ದಿನ ಭಾರಿ ಮಳೆ… ಎಲ್ಲಿಲ್ಲಿ?
Darshan bail : ದರ್ಶನ್ ಜಾಮೀನು ಅರ್ಜಿಯಲ್ಲಿ ಏನಿದೆ?
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಪರ ವಕೀಲರು ದರ್ಶನ್‌ಗೆ ಜಾಮೀನು ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಹತ್ಯೆಗೂ ದರ್ಶನ್ಗೂ ಸಂಬಂಧವಿಲ್ಲ ಎಂದು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಹೊಸ ಪಡಿತರ ಚೀಟಿಗೆ ಅರ್ಜಿ; ಸರ್ಕಾರದಿಂದ ಮಹತ್ವದ ಮಾಹಿತಿ!
ಕಿಡ್ನ್ಯಾಪ್ನಲ್ಲಿ ದರ್ಶನ್ ಅವರ ಯಾವ ಪಾತ್ರವಿಲ್ಲ. A-10 ಆರೋಪಿ ವಿನಯ್, A-3 ಆರೋಪಿ ಪವನ್ ಸೂಚನೆ ಮೇರೆಗೆ ರೇಣುಕಾಸ್ವಾಮಿಗೆ ಕಿಡ್ನ್ಯಾಪ್ ಮಾಡಲಾಗಿದೆ ಎಂದು ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ.