Actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ (Darshan) ಅನಾರೋಗ್ಯದ ಕಾರಣ ನೀಡಿ ಜಾಮೀನು (Bail) ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.
ಹೌದು, ಅನಾರೋಗ್ಯದ ಕಾರಣ ನೀಡಿ ನಟ ದರ್ಶನ್ ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದು, ಹೈಕೋರ್ಟ್ನಲ್ಲಿ ಎರಡು ದಿನಗಳ ಕಾಲ ಜಾಮೀನು ಅರ್ಜಿ ವಿಚಾರಣೆ ನಡೆಸಲಾಗಿದ್ದು, ಅರ್ಜಿಯ ಆದೇಶವನ್ನು ಇಂದಿಗೆ ಕಾಯ್ದಿರಿಸಲಾಗಿದೆ. ಆರೋಪಿ ಪರ ವಕೀಲ ನಾಗೇಶ್ ವಾದ ಮಂಡಿಸಿದರು. ಆದರೆ ಎಸ್ಪಿಪಿ ಅವರು ದರ್ಶನ್ ಜಾಮೀನು ಅರ್ಜಿಗೆ ಕೆಲ ತಕರಾರುಗಳನ್ನು ಎತ್ತಿದ್ದು, ಇಬ್ಬರ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಾಧೀಶರು ಆದೇಶವನ್ನು ಇಂದಿಗೆ ಕಾಯ್ದಿರಿಸಿದೆ.
ಇದನ್ನೂ ಓದಿ: Actor Darshan : ನಟ ದರ್ಶನ್ ಗೆ ಪಾರ್ಶ್ವವಾಯು ಆಗುವ ಸಾಧ್ಯತೆ..? ವೈದ್ಯಕೀಯ ವರದಿಯಲ್ಲಿ ಬಹಿರಂಗ..!
Actor Darshan : ಜಾಮೀನು ಸಿಗುವ ನಿರೀಕ್ಷೆಯಲ್ಲಿ ದರ್ಶನ್..!
ಇನ್ನು, ವಿಚಾರಣಾಧೀನ ಖೈದಿಗೆ ಚಿಕಿತ್ಸೆ ಪಡೆಯುವ ಅವಕಾಶ ಇದ್ದು, ದರ್ಶನ್ ಗೆ ಜಾಮೀನು ಇಂದು ಸಿಗಬಹುದು ಎಂಬ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಈ ವಾರ ಬಳ್ಳಾರಿ ಜೈಲಿಗೆ ಭೇಟಿ ನೀಡಿಲ್ಲ.
120 ದಿನಗಳಿಗೂ ಅಧಿಕ ಕಾಲ ಜೈಲಿನಲ್ಲಿರುವ ದರ್ಶನ್ಗೆ ಇಂದು ಜಾಮೀನು ಸಿಗುವ ನಿರೀಕ್ಷೆಯಿದ್ದು, ಭರ್ಜರಿ ಸ್ವಾಗತ ಕೋರಲು ಫ್ಯಾನ್ಸ್ ಸಿದ್ಧರಾಗಿದ್ದಾರೆ ಎನ್ನಲಾಗಿದೆ.