Actress Ramya posts : ಸುಪ್ರೀಂ ಕೋರ್ಟ್ ನಟ ದರ್ಶನ್ ಮತ್ತು ಇತರ ಆರು ಆರೋಪಿಗಳ ಜಾಮೀನನ್ನು ರದ್ದುಗೊಳಿಸಿದ ಹಿನ್ನಲೆ ಸ್ಯಾಂಡಲ್‌ವುಡ್ ನಟಿ ರಮ್ಯಾ ಅವರು ಪ್ರತಿಕ್ರಿಯಿಸಿದ್ದಾರೆ.
ರಮ್ಯಾ ಅವರು ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಉಳಿದವರಿಗೆ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್ ತೀರ್ಪು ಪ್ರಮುಖ ಸಂದೇಶವನ್ನು ನೀಡಿದೆ ಎಂದು ಹೇಳಿದ್ದಾರೆ.
“ಕಾನೂನಿನ ಮುಂದೆ ಎಲ್ಲರೂ ಸಮಾನರು. ಎಲ್ಲರಿಗೂ ನಾನು ಹೇಳುವುದು ಇಷ್ಟೇ, ಕಾನೂನು ಪ್ರಕ್ರಿಯೆಯನ್ನು ನಂಬಿ ಮತ್ತು ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ. ನ್ಯಾಯ ಎಲ್ಲರಿಗೂ ಸಿಕ್ಕೇ ಸಿಗುತ್ತದೆ” ಎಂದು ರಮ್ಯಾ ಬರೆದಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಈ ಹಿಂದೆ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳಿಗೆ ಜಾಮೀನು ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್, ಇಂದು ಈ ಏಳು ಆರೋಪಿಗಳ ಜಾಮೀನನ್ನು ರದ್ದುಗೊಳಿಸಿ, ತಕ್ಷಣವೇ ಶರಣಾಗುವಂತೆ ಆದೇಶಿಸಿದೆ.




