Actor Darshan granted bail : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಗ್ ರಿಲೀಫ್. ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಹೌದು, ದರ್ಶನ್ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೀಪ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಜೈಲು ಸೇರಿ 130 ದಿನಗಳಾಗಿದ್ದವು. ಆ ಬಳಿಕ ನಟ ದರ್ಶನ್ ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರ ಬಂದು ಆಸ್ಪತ್ರೆ ಸೇರಿದ್ದರು.
ಕಳೆದ ಒಂದೂವರೆ ತಿಂಗಳಿಂದ ಆಸ್ಪತ್ರೆಯಲ್ಲೇ ಇದ್ದ ನಟ ದರ್ಶನ್ ಸೇರಿ ಇದೀಗ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲಾ ಆರೋಪಿಗಳಿಗೂ ಈಗ ಜಾಮೀನು ಮಂಜೂರಿ ಮಾಡಲಾಗಿದೆ.