ಬೆಂಗಳೂರು : ಕೃಷಿ ಮಸೂದೆ ತಿದ್ದುಪಡಿ ವಿರೋಧಿಸಿ ರಾಜ್ಯದಲ್ಲಿ ರೈತ ಸಂಘಟನೆಗಳು, ವಿರೋಧ ಪಕ್ಷಗಳು, ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದೆ.
ಈ ಸಂದರ್ಭದಲ್ಲಿ ಕನ್ನಡ ಚಿತ್ರರಂಗದಲ್ಲಿ ಚಂದ್ರ ಚಕೋರಿ, ಉಗ್ರಂ, ರಥಾವರ, ಸಿನಿಮಾಗಳಂತಹ ಯಶಸ್ವಿ ಸಿನಿಮಾಗಳನ್ನು ನೀಡಿರುವ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ರೈತರ ಪರವಾಗಿ ಮಾತನಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ನಟ ಶ್ರೀಮುರಳಿ ಅವರು, “ಒಂದಲ್ಲೊಂದು ರೂಪದಲ್ಲಿ ನಾವೆಲ್ಲ ಕೃಷಿ ಹಿನ್ನೆಲೆಯಿಂದಲೇ ಬಂದವರು. ರಾಜಕಾರಣಿಯೋ, ಕಲಾವಿದರೋ ಅಥವಾ ಉದ್ಯಮಿಯೋ. ಅದು ಯಾರೇ ಆದರೂ ಸರಿ. ರೈತರು ಬೆವರು ಹರಿಸಿ, ಕಷ್ಟಪಟ್ಟು ತಮ್ಮ ಜಮೀನುಗಳಲ್ಲಿ ಬೆಳೆ ಬೆಳೆದರೆ ಮಾತ್ರ ನಾವೆಲ್ಲಾ ಸರಿಯಾಗಿ ಕುಳಿತು ಊಟ ಮಾಡಲು ಸಾಧ್ಯ. ಹಾಗಾಗಿ ಯಾರೇ ಆದರೂ ಸರಿ. ರೈತರ ಬಗ್ಗೆ ಅಗೌರವ ತೋರುವುದು ಸರಿಯಲ್ಲ’ ಎಂದು ಹೇಳಿದ್ದಾರೆ.
ಒಂದಲ್ಲೊಂದು ರೂಪದಲ್ಲಿ ನಾವೆಲ್ಲ ಕೃಷಿ ಹಿನ್ನೆಲೆಯಿಂದಲೇ ಬಂದವರು. ರಾಜಕಾರಣಿಯೋ, ಕಲಾವಿದರೋ ಅಥವಾ ಉದ್ಯಮಿಯೋ, ಅದು ಯಾರೇ ಆದರೂ ಸರಿ, ರೈತರು ತಮ್ಮ ಜಮೀನುಗಳಲ್ಲಿ ಕಷ್ಟಪಟ್ಟು ಬೆವರು ಹರಿಸಿ ಬೆಳೆ ಬೆಳೆದರೆ ಮಾತ್ರ ನಾವೆಲ್ಲ ಅಚ್ಚುಕಟ್ಟಾಗಿ ಕುಳಿತು ಭೋಜನ ಸವಿಯುವುದು. ಹಾಗಾಗಿ ಯಾರೇ ಆದರೂ ಸರಿ, ರೈತರ ಬಗ್ಗೆ ಅಗೌರವ ತೋರುವುದು ಸರಿಯಲ್ಲ.
— SRIIMURALI (@SRIMURALIII) September 23, 2020