ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರಿಗೆ ರಾಜ್ಯ ಸರ್ಕಾರದಿಂದ ಗಿಫ್ಟ್ ನೀಡಲಾಗಿದ್ದು, ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಸುದೀಪ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ವಿಶೇಷ ಗೌರವ ನೀಡಿದೆ.
ಈ ಕುರಿತು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಘೋಷಿಸಿದ್ದಾರೆ. ಈ ಸಂಬಂಧ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



