ಹೆಬ್ಬುಲಿ ಸಿನಿಮಾದ ನಟಿ​​​ಗೆ ಲೈಂಗಿಕ ಕಿರುಕುಳ; ಮಾಜಿ ಪ್ರಿಯಕರ ಅರೆಸ್ಟ್!

ಕಿಚ್ಚ ಸುದೀಪ್ ನಟನೆಯ ಹೆಬ್ಬುಲಿ ಸಿನಿಮಾದ ನಟಿ ಅಮಲಾ ಪೌಲ್‌ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಅಮಲಾ ಪೌಲ್‌…

Actress Amala Paul vijayaprabha news

ಕಿಚ್ಚ ಸುದೀಪ್ ನಟನೆಯ ಹೆಬ್ಬುಲಿ ಸಿನಿಮಾದ ನಟಿ ಅಮಲಾ ಪೌಲ್‌ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

Actress Amala Paul

ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಅಮಲಾ ಪೌಲ್‌ ತಮಿಳುನಾಡಿನ ವಿಲ್ಲುಪುರಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ 15 ಪುಟಗಳ ದೂರು ಸಲ್ಲಿಸಿದ್ದು, ಚಿತ್ರ ನಿರ್ಮಾಣ ಮಾಡುವ ಉದ್ದೇಶದಿಂದ ನನ್ನ ಬಳಿ ಕೋಟ್ಯಂತರ ರೂಪಾಯಿ ಹಣ ಪಡೆದುಕೊಂಡು ವಾಪಸ್ ಕೊಟ್ಟಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದರ ಜೊತೆಗೆ ಖಾಸಗಿ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದು, ವಿಲ್ಲುಪುರಂನ ಆರೋವಿಲ್ಲ ಬಳಿಯ ಸ್ವಂತ ಮನೆಯಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ನಟಿ ಆರೋಪಿಸಿದ್ದಾಳೆ.

Vijayaprabha Mobile App free

ಇನ್ನು, ಬಂಧಿತ ಬವೇಂದರ್ ಸಿಂಗ್ ದತ್ ರಾಜಸ್ಥಾನದ ಜೈಪುರ ಮೂಲದವ ಎನ್ನಲಾಗಿದ್ದು, ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬವೇಂದರ್‌ ಸೇರಿದಂತೆ 12 ಜನರ ವಿರುದ್ಧ ವಿಲ್ಲುಪುರಂ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,ಉಳಿದ 11 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.