ಕಾಂಗ್ರೆಸ್ ಪಕ್ಷದಲ್ಲಿ ಮೂಲೆಗುಂಪಾಗಿರುವ ಮಾಜಿ ಸಂಸದೆ, ಮೋಹಕ ತಾರೆ ನಟಿ ರಮ್ಯಾ ಅವರು ಇದೀಗ ಬಿಜೆಪಿ ಪಕ್ಷ ಸೇರ್ಪಡೆಗೆ ಒಲವು ತೋರಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಒಂದುವೇಳೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರದೇ ಹೋದರೆ, ನಟಿ ರಮ್ಯಾ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ರಮ್ಯಾ ಬಿಜೆಪಿ ಸೇರುವ ವಿಚಾರ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, 2-3 ಸುತ್ತಿನ ಮಾತುಕತೆಗಳು ಬಾಕಿ ಇವೆ ಎನ್ನಲಾಗಿದೆ.

ಹಳೇ ಮೈಸೂರು ಭಾಗದಲ್ಲಿ ರಮ್ಯಾ ಈಗಲೂ ವರ್ಚಸ್ಸು ಹೊಂದಿರುವ ಕಾರಣ, ರಮ್ಯಾ ಸೇರ್ಪಡೆ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ ಸ್ಟಾರ್ ವರ್ಚಸ್ಸು ತಂದುಕೊಡಲಿದ್ದು, ಈ ಭಾಗದಲ್ಲಿ ಬಿಜೆಪಿ ಬಲವರ್ಧನೆಗೆ ರಮ್ಯಾ ಸೂಕ್ತ ಆಯ್ಕೆ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




