Megha Shetty: ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕರ್ನಾಟಕದಲ್ಲಿ ಜನಪ್ರಿಯತೆ ಗಳಿಸಿದ್ದ ಮಂಗಳೂರಿನ ಬೆಡಗಿ ಮೇಘಾ ಶೆಟ್ಟಿ ಬಿಗ್ ಬಾಸ್ ಸೀಸನ್ 10ರ ಶೋನಲ್ಲಿ ಭಾಗವಹಿಸುತ್ತಾರೆಯೇ ಎಂಬ ಸುದ್ದಿಗೆ ಕೊನೆಗೂ ಉತ್ತರ ಸಿಕ್ಕಿದೆ.
ಇದನ್ನೂ ಓದಿ: ಖ್ಯಾತ ನಟಿಗೆ ಸೂಪರ್ ಸ್ಟಾರ್ ರಜನಿಕಾಂತ್ ಬೆದರಿಕೆ? ಅವಳಿಗಾಗಿಯೇ ತಲೈವಾ ವಾರ್ನಿಂಗ್!
ಮೇಘಾ ಶೆಟ್ಟಿ ಕಿರುತೆರೆಯಲ್ಲಿ ಕಾಣಿಸಿಕೊಂಡಾಗಿನಿಂದ ಬಿಗ್ ಬಾಸ್‌ನ ಪ್ರತಿ ಸೀಸನ್‌ನಲ್ಲಿ ಅವರ ಹೆಸರು ನಿರಂತರವಾಗಿ ಳುಕು ಹಾಕಿಕೊಳ್ಳುತ್ತಿತ್ತು. ಅದರಂತೆಯೇ ಈ ಬಾರಿ ಕೂಡ ಬಿಗ್ ಬಾಸ್ ಸೀಸನ್ 10ರ ಶೋನಲ್ಲಿ ಮೇಘಾ ಶೆಟ್ಟಿ ಕಾಣಿಸಿಕೊಳ್ಳುತ್ತಾರೆ ಎಂದೇ ಹೇಳಲಾಗಿತ್ತು. ಆದರೆ ಈಗ ಈ ಸುದ್ದಿ ಸುಳ್ಳಾಗಿದೆ.
ಮೂಲಗಳ ಪ್ರಕಾರ ಮೇಘಾ ಶೆಟ್ಟಿ ಬಿಗ್ ಬಾಸ್ ಸೀಸನ್ 10ರ ಶೋನಲ್ಲಿ ಭಾಗವಹಿಸುವುದಿಲ್ಲ ಎನ್ನಲಾಗಿದೆ. ಹೌದು, ‘ಟ್ರೈಬಲ್ ರೈಡಿಂಗ್’ ಚಿತ್ರದ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಅವರು ಸದ್ಯ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದು, ‘ಕೈವ’, ‘ಲಂಡನ್ ಕೆಫೆ’ ಚಿತ್ರಗಳು ಬಿಡುಗಡೆ ಹಂತದಲ್ಲಿವೆ .

ಇದನ್ನೂ ಓದಿ:ವ್ಯಾಪಾರ ಕ್ಷೇತ್ರದಲ್ಲಿ ಮಿಂಚುತ್ತಿರುವ ಶಾರುಖ್ ಪತ್ನಿ, ಗೌರಿ ಖಾನ್ ಅವರ ಆಸ್ತಿ ಎಷ್ಟು ಕೋಟಿ ಗೊತ್ತಾ?
ಬದಲಿಗೆ, ಅವರು ನಟ ವಿನಯ್ ರಾಜ್‌ಕುಮಾರ್ ಅವರ ಮುಂಬರುವ ಚಿತ್ರ ‘ಗ್ರಾಮಾಯಣ’ ಅಕ್ಟೋಬರ್ 4 ರಂದು ಚಿತ್ರೀಕರಣ ಪ್ರಾರಂಭವಾಗಲಿದೆ. ಹಳ್ಳಿ ಹುಡುಗಿಯ ಪಾತ್ರಕ್ಕೆ ತಯಾರಿ ಮಾಡುವ ಸಲುವಾಗಿ, ನಿರ್ದಿಷ್ಟ ದೃಶ್ಯದ ಚಿತ್ರೀಕರಣವನ್ನು ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಮುಂದಿನ ತಿಂಗಳ ತನಕ ಶೂಟಿಂಗ್ ಇರುವ ಕಾರಣ ಬಿಗ್ ಬಾಸ್ ಶೋಗೆ ಎಂಟ್ರಿಯಾಗುತ್ತಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಐಪಿಎಲ್ ಮಾದರಿಯಲ್ಲಿ ಬೆಂಗಳೂರು ಕಂಬಳ; ಐಶ್ವರ್ಯ ರೈ, ಅನುಷ್ಕಾ ಶೆಟ್ಟಿ, ಉಪೇಂದ್ರ ಸೇರಿದಂತೆ ಸ್ಟಾರ್ ಕಲಾವಿದರ ಸಾಥ್
ಇನ್ನು, ಅಕ್ಟೋಬರ್ 8 ರಂದು ಕಿಚ್ಚ ಸುದೀಪ್ ನಡೆಸಿಕೊಡುತ್ತಿರುವ ಬಿಗ್ ಬಾಸ್ ಶೋ ಸಂಜೆ 6 ಗಂಟೆಗೆ ಅದ್ಧೂರಿಯಾಗಿ ತೆರೆಕಾಣಲಿದೆ. ಪ್ರತಿ ದಿನ ರಾತ್ರಿ 9:30ಕ್ಕೆ ಕಾರ್ಯಕ್ರಮ ಪ್ರಸಾರವಾಗಲಿದೆ. ಸ್ಪರ್ಧಿಗಳಾಗಿ ಯಾರು ಭಾಗವಹಿಸುತ್ತಾರೆ ಎಂಬುದು ಸದ್ಯಕ್ಕೆ ತಿಳಿದಿಲ್ಲ.