ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಬಣ್ಣದ ಬದುಕು ಆರಂಭಿಸಿ ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ಸೇರಿದಂತೆ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ಕಿರಿಕ್ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಈಗ ಅಪ್ಪಟ ಹಳ್ಳಿ ಹುಡುಗಿ ಆಗಿದ್ದಾರೆ.
ಹೌದು, ರಶ್ಮಿಕಾ ಮಂದಣ್ಣ ಕೆಸರು ಗದ್ದೆಯಲ್ಲಿ ಕೃಷಿ ಕೆಲಸದಲ್ಲಿ ತೊಡಗಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು, ಅದನ್ನು ಸ್ವತಃ ರಶ್ಮಿಕಾ ತಮ್ಮ ಇನ್ಸ್ಟಾಗ್ರಾಂ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಆದರೆ ಇದು ರಿಯಲ್ ಅಲ್ಲ ಇದೊಂದು ಚಿತ್ರದ ಶೂಟಿಂಗ್ ಆಗಿದ್ದು, ತಮಿಳಿನ ಕಾರ್ತಿ ಅಭಿನಯದ ಸುಲ್ತಾನ್ ಚಿತ್ರಕ್ಕಾಗಿ ನಟಿ ರಶ್ಮಿಕಾ ಈ ರೀತಿ ಮಾಡಿದ್ದಾರೆ. ಈ ಚಿತ್ರದಲ್ಲಿ ಹಳ್ಳಿ ಯುವತಿಯ ಪಾತ್ರದಲ್ಲಿ ರಶ್ಮಿಕಾ ನಟಿಸಿದ್ದಾರೆ. ರಶ್ಮಿಕಾ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರದ ವಿಡಿಯೋ ಹಂಚಿಕೊಂಡಿದ್ದಾರೆ. ಇನ್ನು ಈ ದೃಶ್ಯದಲ್ಲಿ ಯಾಂತ್ರೀಕೃತ ನೇಗಿಲಿನಿಂದ ಹೊಲವನ್ನು ಉಳುಮೆ ಮಾಡುವ ಹಳ್ಳಿ ಯುವತಿಯಾಗಿ ಕಾಣಿಸಿಕೊಂಡಿದ್ದು ವೈರಲ್ ಆಗಿದೆ.
ಇನ್ನು ತಮಿಳಿನ ಕಾರ್ತಿ ಅಭಿನಯದ ಸುಲ್ತಾನ್ ಸಿನಿಮಾ ಏಪ್ರಿಲ್ 2 ರಂದು ಬಿಡುಗಡೆಯಾಗಲಿದ್ದು, ಬಕ್ಕಿಯರಾಜ್ ಕಣ್ಣನ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ಡ್ರೀಮ್ ವಾರಿಯರ್ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಪ್ರಕಾಶ್ ಬಾಬು, ವೈ.ಎಸ್.ಆರ್. ಪ್ರಭು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
View this post on Instagram