ಅಕ್ಷಯ್ ಕುಮಾರ್ ನಟನೆಯ ‘ಲಕ್ಷ್ಮಿ ಬಾಂಬ್’ ಸಿನಿಮಾದ ಟ್ರೈಲರ್ ರಿಲೀಸ್

ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಬಹುನಿರೀಕ್ಷಿತ ‘ಲಕ್ಷ್ಮಿ ಬಾಂಬ್’ ಸಿನಿಮಾದ ಟ್ರೈಲರ್ ಶುಕ್ರವಾರ ಬಿಡುಗಡೆಯಾಗಿದೆ. ಈ ಟ್ರೇಲರ್‌ಗೆ ಸೋಷಿಯಲ್ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈ ಟ್ರೈಲರ್‌ನಲ್ಲಿ ಅಕ್ಷಯ್ ಕುಮಾರ್ ಅವರು…

akshay kumar vijayaprabha

ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಬಹುನಿರೀಕ್ಷಿತ ‘ಲಕ್ಷ್ಮಿ ಬಾಂಬ್’ ಸಿನಿಮಾದ ಟ್ರೈಲರ್ ಶುಕ್ರವಾರ ಬಿಡುಗಡೆಯಾಗಿದೆ. ಈ ಟ್ರೇಲರ್‌ಗೆ ಸೋಷಿಯಲ್ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈ ಟ್ರೈಲರ್‌ನಲ್ಲಿ ಅಕ್ಷಯ್ ಕುಮಾರ್ ಅವರು ಹಾರರ್-ಹಾಸ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಚಿತ್ರದ ಬಗ್ಗೆ ಬೀ-ಟೌನ್ ಪ್ರೇಕ್ಷಕರ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದ್ದು ಸೋಷಿಯಲ್ ಮೀಡಿಯಾದಲ್ಲಿ ಟ್ರೈಲರ್‌ಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ.

ರಾಘವ ಲಾರೆನ್ಸ್ ಹಿಂದಿಯಲ್ಲಿ ‘ಲಕ್ಷ್ಮಿ ಬಾಂಬ್’ ಹೆಸರಿನಲ್ಲಿ ದಕ್ಷಿಣದಲ್ಲಿ ಸೂಪರ್ ಹಿಟ್ ಆಗಿದ್ದ ‘ಕಾಂಚನಾ’ ಚಿತ್ರವನ್ನು ರೀಮೇಕ್ ಮಾಡುತ್ತಿದ್ದು, ಇದರಲ್ಲಿ ಕಿಯಾರಾ ಅಡ್ವಾಣಿ ನಾಯಕಿಯಾಗಿ ನಟಿಸಿದ್ದಾರೆ. ತೆಲುಗಿನಲ್ಲಿ ಹಿರಿಯ ನಟ ಶರತ್ ಕುಮಾರ್ ಮಂಗಳಮುಖಿ ಪಾತ್ರದಲ್ಲಿ ನಟಿಸಿದ್ದರೆ, ರಾಘವ ಲಾರೆನ್ಸ್ ನಾಯಕನಾಗಿ ನಟಿಸದ್ದರು. ಆದರೆ ‘ಲಕ್ಷ್ಮಿ ಬಾಂಬ್’ ಚಿತ್ರದಲ್ಲಿ ಅಕ್ಷಯ್ ಕುಮಾರ್ ದ್ವಿಪಾತ್ರ ಕಾಣಿಸಿಕೊಂಡಿದ್ದಾರೆ. ಅಕ್ಷಯ್ ಲವರ್ ಬಾಯ್ ಪಾತ್ರದಲ್ಲಿ ಲಕ್ಷ್ಮಣ್, ಲಕ್ಷ್ಮಿ ಪಾತ್ರದಲ್ಲಿ ಮಂಗಳಮುಖಿಯಾಗಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರವನ್ನು ರಾಘವ ಲಾರೆನ್ಸ್ ನಿರ್ದೇಶನ ಮಾಡುತ್ತಿದ್ದು, ತಾನೀಶ್ ಬಾಗ್ಚಿ, ಶಶಿ-ಖುಷಿ ಮತ್ತು ಅನೂಪ್ ಕುಮಾರ್ ಅವರ ಸಂಗೀತ ಸಂಯೋಜನೆ ಮಾಡಿದ್ದಾರೆ. ಲಕ್ಷ್ಮಿ ಬಾಂಬ್ ಸಿನಿಮಾ ಶೂಟಿಂಗ್ ಪೂರ್ಣಗೊಂಡ ನಂತರ ಚಿತ್ರವನ್ನು ದೀಪಾವಳಿಗೆ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಒಟಿಟಿ ಪ್ಲಾಟ್‌ಫಾರ್ಮ್ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ.

Vijayaprabha Mobile App free

ಇತ್ತೀಚೆಗೆ ಬಿಡುಗಡೆಯಾದ ಸಿನಿಮಾದ ಮೋಷನ್ ಪೋಸ್ಟರ್ ಸೋಷಿಯಲ್ ಮೀಡಿಯಾದಲ್ಲಿ ದಾಖಲೆ ನಿರ್ಮಿಸುತ್ತಿದೆ. ಬಿಡುಗಡೆಯಾದ 24 ಗಂಟೆಗಳಲ್ಲಿ 21 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.