Anushka Shetty-Sania Mirza: ದಕ್ಷಿಣ ಭಾರತದ ಖ್ಯಾತ ನಟಿ, ಯೋಗ ಬ್ಯುಟಿ ಎಂದೇ ಖ್ಯಾತಿ ಪಡೆದಿರುವ ಕನ್ನಡ ಮೂಲದ ನಟಿ ಅನುಷ್ಕಾ ಶೆಟ್ಟಿ ಹಾಗು ಟೆನಿಸ್ ದಿಗ್ಗಜ ಆಟಗಾರ್ತಿ ಮೂಗುತಿ ಸುಂದರಿ ಸಾನಿಯಾ ಮಿರ್ಜಾ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ: ಮತದಾರರ ಪಟ್ಟಿ ಪ್ರಕಟ; ಮತದಾರರು, ಅಭ್ಯರ್ಥಿಗಳು, ಮತಗಟ್ಟೆಗಳ ಎಲ್ಲಾ ಮಾಹಿತಿ ಲಭ್ಯ..!
Anushka Shetty-Sania Mirza: ಖ್ಯಾತ ನಟಿ, ಯೋಗ ಬ್ಯುಟಿ ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ
ಹೌದು, ದಕ್ಷಿಣ ಭಾರತದ ಖ್ಯಾತ ನಟಿ, ಯೋಗ ಬ್ಯುಟಿ ಎಂದೇ ಖ್ಯಾತಿ ಪಡೆದಿರುವ ಕನ್ನಡ ಮೂಲದ ನಟಿ ಅನುಷ್ಕಾ ಶೆಟ್ಟಿ ಇದೀಗ ರಾಜಕೀಯಕ್ಕೆ ಎಂಟ್ರಿಯಾಗಲಿದ್ದಾರೆ. ಅವರು ಟಾಲಿವುಡ್ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಸ್ಥಾಪಿಸಿದ ಜನ ಸೇನಾ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ.

ಅಲ್ಲದೆ, ನಟಿ ಅನುಷ್ಕಾ ಶೆಟ್ಟಿಗೆ ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಪೀಠಂಪುರಂ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಟಿ ಯಾವುದೇ ಮಾಹಿತಿ ಹಂಚಿಕೊಂಡಿಲ್ಲವೆಂದು ತಿಳಿದುಬಂದಿದೆ.
ಇದನ್ನು ಓದಿ: ದಿನಕ್ಕೆ ಎಷ್ಟು ನೀರು ಕುಡಿಯಬೇಕು? ನೀರು ಕುಡಿಯದಿದ್ದರೆ ಏನಾಗುತ್ತದೆ ಗೊತ್ತಾ..?
Anushka Shetty-Sania Mirza: ಲೋಕಸಭಾ ಚುನಾವಣೆಗೆ ಸಾನಿಯಾ ಮಿರ್ಜಾ ಸ್ಪರ್ಧೆ?
ಇನ್ನು, ಲೋಕಸಭಾ ಚುನಾವಣೆಗೆ ಟೆನಿಸ್ ದಿಗ್ಗಜ ಆಟಗಾರ್ತಿ ಮೂಗುತಿ ಸುಂದರಿ ಸಾನಿಯಾ ಮಿರ್ಜಾ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳು ಹಬ್ಬಿವೆ. ಅವರು ಹೈದರಾಬಾದ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ.

ಸಾನಿಯಾ ಅವರಂತಹ ಸ್ಟಾರ್ ಇಮೇಜ್ ಹೊಂದಿರುವ ಅಭ್ಯರ್ಥಿ ಸ್ಪರ್ಧಿಸಿದರೆ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂಬುದು ಕಾಂಗ್ರೆಸ್ ಲೆಕ್ಕಾಚಾರವಾಗಿದೆ. ಆ ಪಕ್ಷದ ನಾಯಕರು ಈಗಾಗಲೇ ಸಾನಿಯಾ ಜೊತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ಸ್ಪರ್ಧೆ ಕುರಿತು ಸಾನಿಯಾ ಪ್ರತಿಕ್ರಿಯಿಸಿಲ್ಲ.
ಇದನ್ನು ಓದಿ: ಬೆಂಗಳೂರು ನೀರಿನ ಸಮಸ್ಯೆ; ಕನ್ನಡದಲ್ಲಿ ಟ್ವೀಟ್ ಮಾಡಿ ಪರಿಹಾರ ತಿಳಿಸಿದ ಮೆಗಾ ಸ್ಟಾರ್
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |