Saif Ali Khan : ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ಹಲ್ಲೆ ನಡೆಸಿದ ಪ್ರಮುಖ ಆರೋಪಿ ವಿಜಯ್ ದಾಸ್‌ನನ್ನು ಮುಂಬೈನ ಥಾಣೆ ಪೊಲೀಸರು ಬಂಧಿಸಿದ್ದಾರೆ.
ಹೌದು, ಮುಂಬೈ ಪೊಲೀಸರ ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಸೈಫ್ ಅಲಿ ಖಾನ್ ಮೇಲಿನ ದಾಳಿಯ ನಂತರ ಈತ ಥಾಣೆಯಲ್ಲಿ ಕಾರ್ಮಿಕರ ನಡುವೆ ಅಡಗಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 35 ಪೊಲೀಸ್ ತಂಡಗಳು ಆರೋಪಿಯ ಹುಡುಕಾಟದಲ್ಲಿ ತೊಡಗಿದ್ದು, ಹಲ್ಲೆಕೋರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿವೆ. ಇಂದು ಬೆಳಗ್ಗೆ 9 ಗಂಟೆಗೆ ಪೊಲೀಸರು ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಆರೋಪಿಯನ್ನು ಬಂಧಿಸಿದ್ದು ಹೇಗೆ..?
ಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆತನನ್ನು ರೆಸ್ಟೋರೆಂಟ್ ಬಳಿ ಗುರುತಿಸಿ ಅರೆಸ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಶೋಧ ಕಾರ್ಯಾಚರಣೆಯಲ್ಲಿ ಸುಮಾರು 100 ಪೊಲೀಸರು ಭಾಗವಹಿಸಿದ್ದರು. ಛತ್ತೀಸ್‌ಗಢದ ದುರ್ಗ್ ರೈಲ್ವೇ ನಿಲ್ದಾಣದಲ್ಲಿ ಓರ್ವ ಶಂಕಿತನನ್ನು ಬಂಧಿಸಲಾಗಿತ್ತು ಎಂದು ಈ ಹಿಂದೆ ವರದಿಯಾಗಿತ್ತು.