ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ರಾಬರ್ಟ್ ಚಿತ್ರದ ‘ಬೇಬಿ ಡ್ಯಾನ್ಸ್ ಫ್ಲೋರ್ ರೆಡಿ’ ಎನ್ನುವ ಮತ್ತೊಂದು ಹಾಡು ಯುಟ್ಯೂಬ್‌ನಲ್ಲಿ ರಿಲೀಸ್ ಆಗಿದ್ದು, ಈ ಟ್ರೆಂಡಿಂಗ್ ಆಗಿದೆ.
ರಾಬರ್ಟ್ ಈ ಹಾಡಿಗೆ ‘ಭರ್ಜರಿ’ ನಿರ್ದೇಶಕ ಚೇತನ್ ಕುಮಾರ್ ಬರೆದಿದ್ದು, ಅರ್ಜುನ್ ಜನ್ಯ ಅವರ ಸಂಗೀತದೊಂದಿಗೆ ನಕಾಶ್ ಅಜೀಜ್, ಐಶ್ವರ್ಯ ರಂಗರಾಜನ್ ಹಾಡಿದ್ದಾರೆ. ಮತ್ತೊಂದೆಡೆ ಇದೇ ವೇಳೆ ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ‘ರಾಬರ್ಟ್’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯುತ್ತಿದೆ.
ಇನ್ನು ರಾಬರ್ಟ್ ಚಿತ್ರಕ್ಕೆ ತರುಣ್ ಸುಧೀರ್ ನಿರ್ದೇಶನ ಮಾಡಿದ್ದೂ, ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರು ಬಂಡವಾಳ ಹೂಡಿದ್ದಾರೆ. ರಾಬರ್ಟ್ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ತೆಲುಗಿನ ಖ್ಯಾತ ನಟ ಜಗಪತಿ ಬಾಬು, ರವಿಕಿಶನ್, ಆಶಾ ಭಟ್, ದೇವರಾಜ್ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.