ಧರ್ಮಶಾಲಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಬಳಿಕ ಇದೀಗ ಬಾಲಿವುಡ್‌ನ ಮತ್ತೊಬ್ಬ ನಟ ಆಸಿಫ್ ಬಾಸ್ರಾ ನೇಣಿಗೆ ಶರಣಾಗಿದ್ದಾರೆ.
ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಧರ್ಮಶಾಲಾದಲ್ಲಿ ಬಾಲಿವುಡ್ ನಟ ಆಸಿಫ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಆತ್ಮಹತ್ಯೆಗೆ ಕಾರಣ ಏನುಂಬುದು ತಿಳಿದುಬಂದಿಲ್ಲ. ನಟ ಆಸಿಫ್ ಅವರು ಕಿರುತೆರೆ, ಬಾಲಿವುಡ್ & ಹಾಲಿವುಡ್ ಚಿತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಆಗಮಿಸಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
ಜಾನ್ ಅಬ್ರಹಾಂ ಅಭಿನಯದ ಒನ್ಸ್ ಅಪನ್ ಎ ಟೈಮ್ ಇನ್ ಮುಂಬೈ, ವೃತಿಕ್ ರೋಷನ್ ಅಭಿನಯದ ಕ್ರಿಶ್-3, ಏಕ್ ವಿಲನ್, ಬ್ಲಾಕ್ ಫ್ರೈಡೆ ಸೇರಿದಂತೆ ಹಲವು ಚಿತ್ರಗಳಲ್ಲಿ ಆಸಿಫ್ ಬಾಸ್ರಾ ನಟಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.