ಮುಂಬೈ: ಬಾಲಿವುಡ್ ನಟಿ ಕತ್ರಿನಾ ಕೈಫ್ ತಮ್ಮ ಪತಿಯೊಂದಿಗೆ ಕುಂಭಮೇಳಕ್ಕೆ ಆಗಮಿಸಿದ್ದು ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿದ್ದಾರೆ.
ಈ ಬಾರಿ ಇಲ್ಲಿಗೆ ಬಂದಿರುವುದಕ್ಕೆ ನಾನು ಅದೃಷ್ಟಶಾಲಿ ಎಂದು ಭಾವಿಸುತ್ತೇನೆ. ನನಗೆ ತುಂಬಾ ಸಂತೋಷವಾಗಿದೆ. ಇದು ಬಹಳ ಸುಂದರವಾದ ಸ್ಥಳ. ಈಗ ನಾನು ಸ್ವಾಮೀಜಿಯವರೊಂದಿಗೆ ಇದ್ದೇನೆ. ನಾನು ಅವರ ಆಶೀರ್ವಾದ ಪಡೆದಿದ್ದೇನೆ. ನಾನು ಈಗಷ್ಟೇ ಕುಂಭಮೇಳವನ್ನು ಅನುಭವಿಸಲು ಪ್ರಾರಂಭಿಸಿದ್ದೇನೆ ಎಂದು ಕತ್ರಿನಾ ಕೈಫ್ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ತಿಳಿಸಿದರು.
ನಟಿ ಕತ್ರಿನಾ ಕೈಫ್ ತಮ್ಮ ಅತ್ತೆ ವೀಣಾ ಕೌಶಲ್ ಅವರೊಂದಿಗೆ ಮಹಾ ಕುಂಭಮೇಳದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಇಬ್ಬರೂ ಪರಮಾರ್ಥ ನಿಕೇತನ್ಗೆ ಭೇಟಿ ನೀಡಿ ತಮ್ಮ ಮಹಾಕುಂಭ ಶಿಬಿರದಲ್ಲಿ ತಂಗಿದ್ದರು.
ಕತ್ರಿನಾ ಕೈಫ್ ಮತ್ತು ವೀಣಾ ಕೌಶಲ್ ಅವರ ಭೇಟಿಯ ಫೋಟೋಗಳನ್ನು ಪರಮಾರ್ಥ್ ನಿಕೇತನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.