ಬೆಂಗಳೂರು : ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ವು ಇಂದು ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ನೋಟಿಸ್ ನೀಡಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ನಟಿ ರಾಧಿಕಾ ಕುಮಾರಸ್ವಾಮಿ ಅವರು ತಮ್ಮ ಬ್ಯಾಂಕ್ ಖಾತೆಗೆ ಬಿಜೆಪಿ ಆರ್ ಎಸ್ ಎಸ್ ಮುಖಂಡರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತನಾಗಿರುವ ಯುವರಾಜ್ ಅಲಿಯಾಸ್ ಸ್ವಾಮಿ ಎಂಬುವವರ ಖಾತೆಯಿಂದ 75 ಲಕ್ಷ ರೂ. ಜಮಾ ಆಗಿದೆ ಎಂದು ನಿನ್ನೆಯಷ್ಟೇ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದರು.
ಈ ವಿಚಾರದಲ್ಲಿ ಕಾಣದ ಕೈಗಳ ಕೈವಾಡ ಹಾಗೂ ಕೆಲ ಮುಸುಕಿನ ಗುದ್ದಾಟಗಳಿರಬಹುದು ಎಂದು ಅಧಿಕಾರಿಗಳು ಊಹಿಸಿದ್ದು, ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಒಳಪಡಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.