ಚೆನ್ನೈ: ಖ್ಯಾತ ಬಹುಭಾಷಾ ನಟಿ, ರಾಜಕಾರಣಿ ನಗ್ಮಾಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಚ್ಚರಿ ವಿಷಯ ಏನೆಂದರೆ, ನಟಿ ನಗ್ಮಾ ಅವರು ಏಪ್ರಿಲ್ 2ರಂದು ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದರು. ಕೊರೋನಾ ಲಸಿಕೆ ಮೊದಲ ಡೋಸ್ ಪಡೆದುಕೊಂಡ ನಂತರ ನಗ್ಮಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈಗಾಗಿ ಕೊರೋನಾ ಲಸಿಕೆ ಪಡೆದುಕೊಂಡ ನಂತರವೂ ಕೂಡ ಎಲ್ಲಾ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಿ, ಕೋವಿಡ್ ನಿಯಮ ಪಾಲಿಸಿ ಎಂದು ನಟಿ ನಗ್ಮಾ ಅವರು ಹೇಳಿದ್ದಾರೆ. ನಟಿ ನಗ್ಮಾ ಕನ್ನಡದಲ್ಲಿ ರವಿಮಾಮ, ಕುರುಬನ ರಾಣಿ, ಹೃದಯವಂತ ಸಿನಿಮಾದಲ್ಲಿ ನಟಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.