Darshan bail application : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗದ ಬಂಧನದಲ್ಲಿ ಇರುವ ದರ್ಶನ್, ಅವರ ಗೆಳತಿ ಪವಿತ್ರಾ ಗೌಡ ಹಾಗೂ ಸಹಚರರ ಜಾಮೀನು ಅರ್ಜಿಯ ಭವಿಷ್ಯ ಇನ್ನು ಕೆಲವೇ ಹೊತ್ತಿನಲ್ಲಿ ಪ್ರಕಟವಾಗಲಿದೆ.
ಕಳೆದ ವಾರ ಜಾಮೀನು ಅರ್ಜಿಯ ಮೇಲೆ ವಾದ ಪ್ರತಿವಾದ ನಡೆದಿದ್ದು, 57ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶರು ವಾದ ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ್ದರು. ಆದೇಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ.
ಇದನ್ನೂ ಓದಿ: ಬಳ್ಳಾರಿ ಜೈಲಲ್ಲಿ ನಟ ದರ್ಶನ್ ಬೆನ್ನುನೋವು ಪರೀಕ್ಷೆ: ಎಂಆರ್ಐ ಸ್ಕ್ಯಾನ್ ಅಗತ್ಯವೆಂದು ವೈದ್ಯರ ಸಲಹೆ
ದರ್ಶನ್ಗೆ ಬೆನ್ನು ನೋವು ಪ್ಲಸ್ ಪಾಯಿಂಟ್
ಜೈಲಿನಲ್ಲಿರುವ ದರ್ಶನ್ ಇತ್ತೀಚಿಗೆ ಬೆನ್ನುನೋವಿನ ಸಮಸ್ಯೆಯಿಂದಲೂ ತೀವ್ರವಾಗಿ ಬಳಲುತ್ತಿದ್ದಾರೆ ಎನ್ನಲಾಗಿದೆ. ಇದಕ್ಕೆ ವೈದ್ಯರು ತಪಾಸಣೆಗೆ ಒಳಪಡಿಸುವಂತೆ ಸೂಚನೆ ನೀಡಿದ್ದರೂ, ದರ್ಶನ್ ನಿರಾಕರಿಸಿದ್ದಾರೆ. ನಾನು ಬೆಂಗಳೂರಿನಲ್ಲಿ ಮಾತ್ರವೇ ಚಿಕಿತ್ಸೆ ಪಡೆಯುತ್ತೇನೆ ಎಂದು ಹಠ ಹಿಡಿದಿದ್ದಾರೆ ಎನ್ನಲಾಗಿದೆ.
ಇನ್ನು, ಒಂದು ವೇಳೆ ಇಂದು ವಿಚಾರಣೆಯಲ್ಲಿ ನಟ ದರ್ಶನ್ ಗೆ ಜಾಮೀನು ಸಿಗದಿದ್ದರೆ, ಬೆನ್ನು ನೋವಿನ ಸಮಸ್ಯೆ ಪ್ರಸ್ತಾಪಿಸಿ, ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಆಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.