Darshan: ಬೇಲ್ ಮೇಲೆ ಹೊರಬಂದ ದರ್ಶನ್‌ಗೆ ಶಾಕ್ ನೀಡಲು ಪೊಲೀಸ್ ಇಲಾಖೆ ಸಜ್ಜು!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ…

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಸೇರಿ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದ್ದು, ಈ ಜಾಮೀನು ರದ್ದು ಮಾಡುವಂತೆ ಪೊಲೀಸರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ.

ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ತಯಾರಿ ಮಾಡಿದೆ ಎನ್ನಲಾಗಿದೆ. ಈ ಕುರಿತಂತೆ ಈಗಾಗಲೇ ಚಿಂತನೆ ಮಾಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದ್ದು, ಈ ಮೂಲಕ ಬೇಲ್ ಮೇಲೆ ಹೊರಬಂದ ಆರೋಪಿಗಳಿಗೆ ಶಾಕ್ ನೀಡಲು ಪೊಲೀಸರು ಮುಂದಾಗಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.