ಮುಂಬೈ: ಬಾಲಿವುಡ್ ನಟಿ, ಕರಾವಳಿ ಬೆಡಗಿ ನಟಿ ಶಿಲ್ಪಾ ಶೆಟ್ಟಿ ಅವರು ಮಾಧ್ಯಮ ಸಂಸ್ಥೆಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಹೌದು, ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ ಮತ್ತು ತಮ್ಮ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿರುವ ನಟಿ ಶಿಲ್ಪಾ ಶೆಟ್ಟಿ, ಬಾಂಬೆ ಹೈಕೋರ್ಟ್ ನಲ್ಲಿ 29 ಜನ ಮಾಧ್ಯಮ ಸಿಬ್ಬಂದಿ ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ಮಾನನಷ್ಟ ಖಟ್ಲೆ ಹೂಡಿದ್ದು, ಈ ಬಗ್ಗೆ ಇಂದು ವಿಚಾರಣೆ ನಡೆಯಲಿದೆ.
ಇನ್ನು, ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.