BREAKING | ಮಠ, ಎದ್ದೇಳು ಮಂಜುನಾಥ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

Director Guruprasad suicide: ಮಠ, ಎದ್ದೇಳು ಮಂಜುನಾಥ ಸಿನಿಮಾ ಕ್ಯಾತಿಯ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು, ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ನಿರ್ದೇಶಕ…

Director Guruprasad committed suicide

Director Guruprasad suicide: ಮಠ, ಎದ್ದೇಳು ಮಂಜುನಾಥ ಸಿನಿಮಾ ಕ್ಯಾತಿಯ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೌದು, ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ನಿರ್ದೇಶಕ ಗುರುಪ್ರಸಾದ್ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗುರುಪ್ರಸಾದ್ ಅವರು 10 ದಿನದ ಹಿಂದಿಯೇ ಫ್ಯಾನ್ ಗೆ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

Vijayaprabha Mobile App free

ಇದನ್ನೂ ಓದಿ : NAMO Drone Didi Scheme | ಮಹಿಳೆಯರಿಗೆ ಉಚಿತವಾಗಿ ₹8 ಲಕ್ಷ; ಪ್ರಯೋಜನಗಳು, ಅರ್ಹತೆ, ಅರ್ಜಿ ಪ್ರಕ್ರಿಯೆ ಹೇಗೆ?

ನಿರ್ದೇಶಕ ಗುರು ಪ್ರಸಾದ್ ನಿರ್ದೇಶಿಸಿದ್ದ ನಟ ಜಗ್ಗೇಶ್ ಅಭಿನಯದ ‘ಮಠ’, ಎದ್ದೇಳು ಮಂಜುನಾಥ ಸಿನಿಮಾ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದವು.

ಇನ್ನು, ಹಲವಾರು ಸಿನಿಮಾಗಳಲ್ಲಿ ನಟನಾಗಿ, ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ್ದ ಗುರುಪ್ರಸಾದ್ ಅವರು 12 ಸಿನಿಮಾಗಳಲ್ಲಿ ನಟಿಸಿ, ಆರು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು.

ಗುರುಪ್ರಸಾದ್ ಅವರು ಮಾದನಾಯಕನಹಳ್ಳಿ ಬಳಿ ಅಪಾರ್ಟ್ ಮೆಂಟ್ ನಲ್ಲಿ ಒಬ್ಬರೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದ್ದು, ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು, ಗುರುಪ್ರಸಾದ್ ಅವರ ಸಾವಿಗೆ ಕಾರಣ ತಿಳಿದುಬಂದಿಲ್ಲವಾದರೂ, ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.