ತಮಿಳು, ತೆಲುಗು ಮತ್ತು ಮಲಯಾಳಂ ಸಿನಿಮಾರಂಗದಲ್ಲಿ ಟಾಪ್ ಹೀರೋಯಿನ್ ಆಗಿ ಗುರುತಿಸಿಕೊಂಡಿರುವ ನಟಿ ಕೀರ್ತಿ ಸುರೇಶ್ ಸಾಕಷ್ಟು ಖ್ಯಾತಿ ಗಳಿಸಿದ್ದು, ಇದೀಗ ಅವರು ಮದುವೆಯಾಗಲು ನಿರ್ಧರಿಸಿದ್ದು, ಮನೆಯವರು ವರನನ್ನು ಓಕೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಹೌದು, ತಂದೆ-ತಾಯಿಗಳು ನಿಶ್ಚಯಿಸಿದ ವರನೊಂದಿಗೆ ಏಳು ಹೆಜ್ಜೆ ಇಡಲು ಕೀರ್ತಿ ಸುರೇಶ್ ಶೀಘ್ರದಲ್ಲೇ ಮದುವೆಯಾಗಲಿದ್ದು,ಸದ್ಯದಲ್ಲೇ ಅಧಿಕೃತ ಘೋಷಣೆ ಹೊರಬೀಳಲಿದೆ ಎನ್ನಲಾಗಿದ್ದು, ಇದಕ್ಕೆ ಸಂಬಂಧಿಸಿದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಎಂದಿನಂತೆ ಸೋಷಿಯಲ್ ಮೀಡಿಯಾದಲ್ಲಿ ನಾಯಕಿಯರ ಮದುವೆ ಬಗ್ಗೆ ಆಗಾಗ ಸುದ್ದಿಗಳು ಹರಿದಾಡುತ್ತಿರುತ್ತವೆ. ಅದರ ಭಾಗವಾಗಿ ಮಲಯಾಳಿ ಚೆಲುವೆ ಕೀರ್ತಿ ಸುರೇಶ್ ವಿವಾಹವಾಗಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದ್ದು, ಕೀರ್ತಿ ಸುರೇಶ್ ಮದುವೆ ಆಗುತ್ತಿರುವುದು ಉದ್ಯಮಿಯೋರ್ವನನ್ನು ಎನ್ನಲಾಗಿದೆ. ಇದರ ಜೊತೆಗೆ ತಮಿಳು ರಾಜಕೀಯದಲ್ಲೂ ಸಕ್ರಿಯರಾಗಿದ್ದಾರಂತೆ.
ಸದ್ಯ, ನಟಿ ಕೀರ್ತಿ ಸುರೇಶ್ ಅಭಿನಯದ ‘ವಾಸಿ’ ಚಿತ್ರ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.