Actor Harish Roy is no more | ʻಕೆಜಿಎಫ್ʼ ಸಿನಿಮಾದಲ್ಲಿ ʻಕೆಜಿಎಫ್ ಚಾಚಾʼ ಎಂದೇ ಖ್ಯಾತರಾದ ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್ ರಾಯ್ (57) ನಿಧನರಾಗಿದ್ದಾರೆ.
ಹೌದು, ಹಲವು ದಿನಗಳಿಂದ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದ ನಟ ಹರೀಶ್ ರಾಯ್ ಅವರು ಇಂದು ನಿಧನರಾಗಿದ್ದಾರೆ. ಅವರು ಥೈರಾಯ್ಡ್ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ನಟ ಯಶ್ ಸೇರಿದಂತೆ ಇನ್ನೂ ಹಲವರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ಆದರೆ ಅಂತಿಮವಾಗಿ ಹರೀಶ್ ಅವರು ಇಂದು ನಿಧನ ಹೊಂದಿದ್ದಾರೆ.
ಸುಮಾರು 2 ದಶಕಗಳಿಂದ ಚಿತ್ರರಂಗದಲ್ಲಿರುವ ಇವರು ಕನ್ನಡ ಮಾತ್ರವಲ್ಲದೆ, ತಮಿಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ‘ಓಂ’ ಚಿತ್ರದ ‘ರಾಯ್’ ಪಾತ್ರದಿಂದ ಖ್ಯಾತಿ ಪಡೆದಿದ್ದ ಇವರು, ‘ಕೆಜಿಎಫ್’ ಚಾಪ್ಟರ್ 1 ಮತ್ತು 2 ಸೇರಿದಂತೆ ಹಲವು ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದಾರೆ.




