ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಅವರ ಹೆಸರಿನಲ್ಲಿ ಎಸ್‌ಬಿ ಗ್ರೂಪ್ ಆ್ಯಂಡ್ ಡೆವಲಪರ್ಸ್ ಕಂಪನಿ ವ್ಯವಸ್ಥಾಪಕರಿಂದ 13.50 ಲಕ್ಷ ರೂ. ಪಡೆದು ವಂಚಿಸಲಾಗಿದೆ ಎಂದು ತಿಳಿದುಬಂದಿದ್ದು, ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಅಮರನಾಥ್ ರೆಡ್ಡಿ ಎಂಬುವರು ದೂರು ನೀಡಿದ್ದು, ದೂರಿನಲ್ಲಿ ನಮ್ಮ ಕಂಪನಿ ಬ್ರ್ಯಾಂಡ್ ಅಂಬಾಸಿಡರ್ ಅಗತ್ಯವಿತ್ತು. ಸ್ನೇಹಿತ ಪ್ರಶಾಂತ್ ಮೂಲಕ ಆರೋಪಿ ಜುನಾಯತ್ ಪರಿಚಯವಾಗಿದ್ದ. ನಟಿ ಪ್ರಣೀತಾ ಅವರನ್ನು ಕಂಪನಿಯ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಿಸುತ್ತೇನೆ ಎಂದು ಹೇಳಿ 13.50 ಲಕ್ಷ ಹಣ ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಅಮರನಾಥ್ ರೆಡ್ಡಿ ಎಂಬುವರು ದೂರಿನನ್ವಯ, ಆರೋಪಿಗಳಾದ ಜುನಾಯಿತ್ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.