ಬೆಂಗಳೂರು: ಕನ್ನಡದ ಕಿರಿಕ್ ಬೆಡಗಿ, ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ವರ್ಕೌಟ್ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು,ಈ ವಿಡಿಯೋದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗಷ್ಟೆ ಸಮುದ್ರ ತೀರದಲ್ಲಿ ರಶ್ಮಿಕಾ ವ್ಯಾಯಾಮ ಮಾಡಿದ್ದ ವಿಡಿಯೋಗಳು ಹರಿದಾಡಿದ್ದವು.
ನಟಿ ರಶ್ಮಿಕಾ ಮಂದಣ್ಣ ಅವರ ವರ್ಕೌಟ್ ವಿಡಿಯೋವೊಂದನ್ನು ಇನ್ಸ್ಟಾಗ್ರಾಂನಲ್ಲಿ ಇಲ್ಲಿಯವರೆಗೆ 7 ಲಕ್ಷಕ್ಕೂ ಅಧಿಕ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದು, 5 ಸಾವಿರಕ್ಕೂ ಹೆಚ್ಚು ಜನರು ಈ ವೀಡೀಯೋಗೆ ಕಾಮೆಂಟ್ ಮಾಡಿದ್ದಾರೆ.
ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರ ಮೊದಲ ತಮಿಳು ಸಿನಿಮಾ ನಟ ಕಾರ್ತಿ ಅಭಿನಯದ ‘ಸುಲ್ತಾನ್’ ಶೂಟಿಂಗ್ ಮುಕ್ತಾಯವಾಗಿದ್ದು ಬಿಡುಗಡೆಗೆ ಸಿದ್ಧವಾಗಿದ್ದು, ತೆಲುಗಿನ ಅಲ್ಲು ಅರ್ಜುನ್ ಜೊತೆ ನಟಿಸುತ್ತಿರುವ ಬಹುನಿರೀಕ್ಷಿತ ‘ಪುಷ್ಪ’ ಸಿನಿಮಾದ ಚಿತ್ರೀಕರಣ ಆರಂಭವಾಗಬೇಕಿದೆ.