BBK11 : ಕಳೆದ ವಾರ ಬಿಗ್ ಬಾಸ್ ಮನೆಯಲ್ಲಿ ಯಾವುದೇ ಎಲಿಮಿನೇಷನ್ ಪ್ರಕ್ರಿಯೆ ನಡೆದಿಲ್ಲ. ಈ ವಾರ ಡಬಲ್ ಎಲಿಮಿನೇಷನ್ ನಡೆದಿದೆ. ಇಬ್ಬರು ಪ್ರಬಲ ಸ್ಪರ್ಧಿಗಳು ದೊಡ್ಮನೆಯಿಂದ ಆಚೆ ಬಂದಿದ್ದಾರೆ.
ಹೌದು, ಈ ವಾರ ಬಿಗ್ಬಾಸ್ ಮನೆಯಿಂದ ಆಚೆ ಹೋಗಲು ಒಟ್ಟು 8 ಮಂದಿ ನಾಮಿನೇಟ್ ಆಗಿದ್ದು, ಅದರಲ್ಲಿ ಭವ್ಯಾ ಗೌಡ, ಶಿಶಿರ್, ತ್ರಿವಿಕ್ರಮ್, ರಜತ್, ಧನರಾಜ್ ಆಚಾರ್ಯ, ಹನುಮಂತ ಹಾಗೂ ಚೈತ್ರಾ ಕುಂದಾಪುರ ನಾಮಿನೇಟ್ ಆಗಿದ್ದಾರೆ. ಜೊತೆಗೆ ಕ್ಯಾಪ್ಟನ್ ಗೌತಮಿ ಜಾಧವ್ ನೇರವಾಗಿ ಮೋಕ್ಷಿತಾ ಪೈ ನಾಮಿನೇಟ್ ಆಗಿದ್ದಾರೆ. ಕೆಲ ವರದಿಗಳ ಪ್ರಕಾರ, ಈ ವಾರ ಅಚ್ಚರಿಯ ಎಲಿಮಿನೇಷನ್ ನಡೆದಿದ್ದು, ಮೂವರ ಹೆಸರು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇಬ್ಬರು ಆಚೆ ಬಂದಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: CM ಸಿದ್ಧರಾಮಯ್ಯ ಅವರಿಗೆ ಮದುವೆ ಆಮಂತ್ರಣ ನೀಡಿ ಆಶೀರ್ವಾದ ಪಡೆದ ಡಾಲಿ ಧನಂಜಯ-ಧನ್ಯತಾ ಜೋಡಿ
ಹೌದು, ಶಿಶಿರ್‌ಗೆ ಕಡಿಮೆ ವೋಟ್‌ಗಳು ಬಂದ ಕಾರಣ ಅವರು ಈ ವಾರ ಆಚೆ ಹೋಗಿದ್ದಾರೆ. ಇನ್ನೊಂದು ಕಡೆ ಗೋಲ್ಡ್ ಸುರೇಶ್ ಮನೆಗೆ ಹೋಗಲೇ ಬೇಕಾದ ಅನಿವಾರ್ಯತೆ ಎದುರಾದ ಕಾರಣ ಅವರು ಅರ್ಧದಲ್ಲೇ ಶೋನಿಂದ ತೆರಳಿದ್ದಾರೆ ಎನ್ನಲಾಗುತ್ತಿದೆ. ವ್ಯಯಕ್ತಿಕ ಕಾರಣಗಳಿಂದ ಬಿಗ್ ಬಾಸ್ ಆಟ ಕ್ವಿಟ್ ಮಾಡಿದ್ದಾರೆ ಎನ್ನಲಾಗಿದೆ.
ಬಿಗ್ ಬಾಸ್ ಮನೆಯಿಂದ ಹೊರ ಬಂದ ಗೋಲ್ಡ್ ಸುರೇಶ್ (Gold Suresh out of BBK11)
ಈ ವಾರ ಕ್ಯಾಪ್ಟನ್ ಆಗಿದ್ದ ಗೋಲ್ಡ್ ಸುರೇಶ್ ಅವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಯಾರು ನಿರೀಕ್ಷೆ ಮಾಡಿರದ ಆಘಾತದ ಸುದ್ದಿಯನ್ನು ಬಿಗ್ ಬಾಸ್ ಘೋಷಣೆ ಮಾಡಿದ್ದಾರೆ.
ಮನೆ ಸದಸ್ಯರೊಬ್ಬರ ನಿಕಟ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದೆ. ಅವರ ಅವಶ್ಯಕತೆ ಬಿಗ್ ಬಾಸ್ ಮನೆಗಿಂತ ಕುಟುಂಬದವರಿಗೆ ಹೆಚ್ಚಿದೆ. ಜಾಸ್ತಿ ತಡ ಮಾಡದೇ ವಸ್ತುಗಳನ್ನು ಪ್ಯಾಕ್ ಮಾಡಿ ಕೂಡಲೇ ಹೊರಡಬೇಕಿದೆ ಎಂದು ತಿಳಿಸಿದ್ದಾರೆ. ಇದರಿಂದ ಸುರೇಶ್ ಕಂಗಾಲಾಗಿದ್ದು, ಮನೆಯ ಸದಸ್ಯರು ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದಾರೆ.