ಸಿನಿ ಪ್ರಿಯರಿಗೆ ಸಿಹಿ ಸುದ್ದಿ:  ಬಹುನಿರೀಕ್ಷಿತ ‘ಕಾಂತಾರಾ-2’ ಬಿಡುಗಡೆ ದಿನಾಂಕ ಫಿಕ್ಸ್

ಮಂಗಳೂರು: ಬಹುನಿರೀಕ್ಷಿತ ‘ಕಾಂತಾರ-2’ ಚಿತ್ರ ಅಕ್ಟೋಬರ್ 2 ರಂದು ಬಿಡುಗಡೆಯಾಗುವುದಾಗಿ ತಿಳಿದುಬಂದಿದೆ.  ಇಲ್ಲಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ-ನಿರ್ದೇಶಕ ರಿಷಭ್ ಶೆಟ್ಟಿ ಈ ಮಾಹಿತಿಯನ್ನು ನೀಡಿದ್ದಾರೆ. ಪತ್ನಿ ಮತ್ತು ಮಕ್ಕಳೊಂದಿಗೆ ಕಟೀಲು…

ಮಂಗಳೂರು: ಬಹುನಿರೀಕ್ಷಿತ ‘ಕಾಂತಾರ-2’ ಚಿತ್ರ ಅಕ್ಟೋಬರ್ 2 ರಂದು ಬಿಡುಗಡೆಯಾಗುವುದಾಗಿ ತಿಳಿದುಬಂದಿದೆ.  ಇಲ್ಲಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ-ನಿರ್ದೇಶಕ ರಿಷಭ್ ಶೆಟ್ಟಿ ಈ ಮಾಹಿತಿಯನ್ನು ನೀಡಿದ್ದಾರೆ.

ಪತ್ನಿ ಮತ್ತು ಮಕ್ಕಳೊಂದಿಗೆ ಕಟೀಲು ಭ್ರಮರಾಂಬಿಕೆ ದೇವಸ್ಥಾನಕ್ಕೆ ಆಗಮಿಸಿದ ರಿಷಭ್ ಶೆಟ್ಟಿ, ‘ಕಾಂತಾರ-2’ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿ ದೇವಿಗೆ ಸೀರೆ ಅರ್ಪಿಸಿದರು.

ದೇವಾಲಯದ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಕಾಂತಾರ-2’ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ ಮತ್ತು ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ ಎಂದು ಹೇಳಿದರು.  ಈ ಚಿತ್ರವನ್ನು ಅಕ್ಟೋಬರ್ 2 ರಂದು ಬಿಡುಗಡೆ ಮಾಡಲು ಯೋಜಿಸಲಾಗಿದೆ ಎಂದು ಅವರು ಹೇಳಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.