Sonu Srinivas Gowda : ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರೀಲ್ಸ್ ರಾಣಿ, ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನು ಶ್ರೀನಿವಾಸ್ ಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇದನ್ನು ಓದಿ: ಈ ದಿನಾಂಕದವರೆಗೂ ಗೃಹ ಲಕ್ಷ್ಮಿ ಯೋಜನೆ ಹಣ ಬಿಡುಗಡೆ; 2000 ಹಣ ಬಿಡುಗಡೆ ಆಗದೆ ಇರುವುದಕ್ಕೆ ಕಾರಣ ಇದೇ..?
ಹೌದು, ಸೋನು ಗೌಡ ಅವರ ನಾಲ್ಕು ದಿನದ ಪೊಲೀಸ್ ಕಸ್ಟಡಿ ಅವಧಿ ಇಂದು (ಮಾ.25) ಮುಕ್ತಾಯಗೊಂಡಿದ್ದು, ಬೆಂಗಳೂರಿನ CJM ಕೋರ್ಟ್ ವಿಚಾರಣೆ ನಡೆಸಿ ಸೋನು ಶ್ರೀನಿವಾಸ್ ಗೌಡಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಇಂದು ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆ ಬ್ಯಾಡರಹಳ್ಳಿ ಪೊಲೀಸರು ರೀಲ್ಸ್ ಸ್ಟಾರ್ ಸೋನು ಗೌಡ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅಲ್ಲದೇ, ನಿನ್ನೆ ರಾಯಚೂರಿಗೆ ಕರೆದೊಯ್ದು ಸ್ಥಳ ಮಹಜರು ಕೂಡ ಮಾಡಲಾಗಿತ್ತು.
ಇದನ್ನು ಓದಿ: ವೋಟರ್ ID ತಿದ್ದುಪಡಿ ಮಾಡಬೇಕೆ? ಇಂದೇ ಕೊನೆಯ ದಿನ
ಕೆಲವು ದಿನಗಳ ಹಿಂದೆ ವಿಡಿಯೋ ಒಂದನ್ನು ಹಂಚಿಕೊಂಡು ಬಾಲಕಿಯನ್ನು ದತ್ತು ಪಡೆದಿರುವುದಾಗಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೋನು ವಿರುದ್ಧ ದೂರು ನೀಡಿದ್ದಾರೆ. ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |