ಬೆಂಗಳೂರು: ‘ನವಗ್ರಹ “ಚಿತ್ರದಲ್ಲಿ ಶೆಟ್ಟಿ ಪಾತ್ರದಲ್ಲಿ ನಟಿಸಿದ್ದ ಗಿರಿ ದಿನೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗಿರಿ ದಿನೇಶ್ ತಮ್ಮ 45ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು.
ಮನೆಯಲ್ಲಿ ಪೂಜೆ ಮಾಡುವಾಗ ಗಿರೀಶ್ ಅವರಿಗೆ ಹೃದಯಾಘಾತವಾಗಿದ್ದು, ಅವರ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ, ಆಸ್ಪತ್ರೆ ತಲುಪುವ ಮೊದಲೇ ಅವರು ಕೊನೆಯುಸಿರೆಳೆದರು.
ಅವರು ನವಗ್ರಹ, ಚಮ್ಕಾಯ್ಸಿ ಚಿಂದಿ ಉಡಾಯ್ಸಿ, ವಜ್ರ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ನವಗ್ರಹದಲ್ಲಿ ಶೆಟ್ಟಿ ಪಾತ್ರಕ್ಕಾಗಿ ಅವರು ಜನಪ್ರಿಯತೆಯನ್ನು ಗಳಿಸಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.