ಶಿವಮೊಗ್ಗ: ಖ್ಯಾತ ನಟ ಕಿಚ್ಚ ಸುದೀಪ್ ಅವರು ತಮ್ಮ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಶಿವಮೊಗ್ಗದ ಬಿಹೆಚ್ ರಸ್ತೆಯಲ್ಲಿರುವ ಸರ್ಕಾರಿ ಶಾಲೆಯೊಂದನ್ನು ದತ್ತು ತೆಗೆದುಕೊಂಡಿದ್ದಾರೆ.
ಹೌದು, ನಟ ಕಿಚ್ಚ ಸುದೀಪ್ ಅವರು ಶಿವಮೊಗ್ಗದ ಬಿಹೆಚ್ ರಸ್ತೆಯಲ್ಲಿರುವ ಸರ್ಕಾರಿ ಶಾಲೆಯನ್ನು ತೆಗೆದುಕೊಂಡಿದ್ದು, ಸುದೀಪ್ ಅವರ ಈ ದತ್ತು ಕಾರ್ಯಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಧಿಕೃತವಾಗಿ ಒಪ್ಪಿಗೆ ಕೊಟ್ಟಿದ್ದಾರೆ. ಈ ಸರ್ಕಾರಿ ಶಾಲೆ 133 ವರ್ಷಗಳ ಹಳೆಯ ಶಾಲೆ ಎನ್ನುವ ಹೆಗ್ಗಳಿಕೆ ಹೊಂದಿದೆ.
ಇನ್ನು, ನಟ ಸುದೀಪ್ ಅವರು ‘ಶಾಲೆಗಾಗಿ ನಾನು ನೀವು’ ಯೋಜನೆಯಡಿ ಶಾಲೆಯನ್ನು ದತ್ತು ಪಡೆದಿದ್ದು, ಈ ಮೂಲಕ ಕಿಚ್ಚ ಅವರ ಶಾಲೆ ಉಳಿಸಿ ಕಾಳಜಿಗೆ ಮತ್ತೊಂದು ಸರ್ಕಾರಿ ಶಾಲೆ ಸೇರಿಸಿಕೊಂಡಂತಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.