ಬೆಂಗಳೂರು: ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸರಬರಾಜು ಮಾಡಿದ ಆರೋಪದ ಹಿನ್ನೆಲೆಯಲ್ಲಿ ‘ಬಿಗ್ ಬಾಸ್-4’ ಖ್ಯಾತಿಯ ಮಸ್ತಾನ್ ಚಂದ್ರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ನೈಜೀರಿಯಾ ಮೂಲದ ಡ್ರಗ್ಸ್ ಪೆಡ್ಲರ್ ಬಂಧಿಸಿ ವಿಚಾರಣೆ ನಡೆಸಿದಾಗ ‘ಬಿಗ್ ಬಾಸ್-4’ ಖ್ಯಾತಿಯ ಮಸ್ತಾನ್ ಚಂದ್ರ ಹೆಸರನ್ನು ಬಾಯ್ಬಿಟ್ಟಿದ್ದ. ಹಾಗಾಗಿ, ಕೋರ್ಟ್‌ನಿಂದ ಸರ್ಚ್ ವಾರೆಂಟ್ ಪಡೆದು ಪೊಲೀಸರು ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಬೆಂಗಳೂರಿನ ಸಂಜಯನಗರದಲ್ಲಿರುವ ಮಸ್ತಾನ್ ನಿವಾಸದಲ್ಲಿ ಗೋವಿಂದಪುರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈಗಾಗಲೇ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಸೇರಿದಂತೆ ಹಲವರನ್ನು ಬಂಧಿಸಿದ್ದು, ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದಾರೆ.