ಬೆಂಗಳೂರು: ಸಚಿವ ಜಮೀರ್ ಪುತ್ರ ಝೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರದ ಡ್ರೋನ್ ಟೆಕ್ನಿಶಿಯನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ ತಂತ್ರಜ್ಞ.
ಸಂತೋಷ್ ದಿನಕ್ಕೆ 25 ಸಾವಿರ ರೂ. ನಿಗದಿ ಮಾಡಿ ಡ್ರೋನ್ ಶೂಟ್ ಮಾಡುತ್ತಿದ್ದರು. ಆದರೆ ಚಿತ್ರದುರ್ಗದ ಗುಡ್ಡದಲ್ಲಿ ಶೂಟಿಂಗ್ ವೇಳೆ ಡ್ರೋನ್ ರೆಕ್ಕೆ ಯಾವುದೋ ವಿಂಡ್ ಫ್ಯಾನ್‌ಗೆ ತಗುಲಿ ಡ್ರೋನ್ ಹಾಳಾಗಿತ್ತು.
ಇದರ ನಷ್ಟ ಭರಿಸುವಂತೆ ಕಲ್ಟ್’ ಚಿತ್ರದ ಡ್ರೋನ್ ತಂತ್ರಜ್ಞ ಸಂತೋಷ್ ಚಿತ್ರತಂಡವನ್ನು ಕೇಳಿಕೊಂಡಿದ್ದಾರೆ. ಆದರೆ ಚಿತ್ರತಂಡ ಯಾವುದೇ ನಷ್ಟ ಭರಿಸದೇ ಮೆಮೊರಿ ಕಾರ್ಡ್ ಕಿತ್ತುಕೊಂಡಿದೆ ಎಂಬ ಆರೋಪ ಕೇಳಿಬಂದಿದೆ.
ಇದರಿಂದ ಮನನೊಂದು ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆನ್ನಲಾಗಿದೆ. ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದು, ಮಾಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment