Kannada movies of 2025 : 2025 ರಲ್ಲಿ ತೆರೆ ಕಾಣಲಿರುವ ನಟ ಯಶ್, ಸುದೀಪ್, ದರ್ಶನ್ ಸೇರಿದಂತೆ ಸ್ಯಾಂಡಲ್ ವುಡ್ ನಂತರ ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳ ಮಾಹಿತಿ ಇಲ್ಲಿದೆ
ಯಶ್ ನಟನೆಯ ಟಾಕ್ಸಿಕ್ ಸಿನಿಮಾ (Yash Toxic movie)
ಯಶ್ (Yash) ನಟನೆಯ, ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕನ್ನಡಿಗರು ಮಾತ್ರವಲ್ಲದೇ ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಈ ಸಿನಿಮಾ 2025 ರ ಡಿಸೆಂಬರ್‌ಗೆ ತೆರೆಗೆ ಬರಲಿದೆ. ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಇದೇ ವರ್ಷ ಆಗಸ್ಟ್‌ನಿಂದ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ನಡೆಯಲಿದೆ.
ಇದನ್ನೂ ಓದಿ: 50 ದಿನ ಪೂರೈಸಿದ ‘ಭೈರತಿ ರಣಗಲ್’
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ಕಾಂತಾರ ಚಾಪ್ಟರ್ 1 (Rishabh Shetty Kantara Chapter 1)
ರಿಷಬ್ ಶೆಟ್ಟಿ (Rishabh Shetty) ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸಹ ಭಾರತವೇ ಎದುರು ನೋಡುತ್ತಿರುವ ಕನ್ನಡ ಸಿನಿಮಾ ಆಗಿದ್ದು, ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ.
ಇದನ್ನೂ ಓದಿ: ಸಂಜು ವೆಡ್ಸ್ ಗೀತಾ-2 ಚಿತ್ರದ ವೀಡಿಯೋ ಹಾಡು ರಿಲೀಸ್
ರಕ್ಷಿತ್ ಶೆಟ್ಟಿ ನಿರ್ದೇಶನ ಮಾಡಿ, ನಟಿಸುತ್ತಿರುವ ರಿಚರ್ಡ್ ಆಂಟೊನಿ ಸಿನಿಮಾ (Rakshith Shetty Richard Antony movie)
ರಕ್ಷಿತ್ ಶೆಟ್ಟಿ (Rakshith Shetty) ನಿರ್ದೇಶನ ಮಾಡಿ, ನಟಿಸುತ್ತಿರುವ ‘ರಿಚರ್ಡ್ ಆಂಟೊನಿ’ ಸಿನಿಮಾದ ಚಿತ್ರೀಕರಣ ಇನ್ನೂ ಪ್ರಾರಂಭ ಆಗಿಲ್ಲ. ಸಿನಿಮಾದ ಕತೆಯಲ್ಲಿ ರಕ್ಷಿತ್ ಶೆಟ್ಟಿ ಸಾಕಷ್ಟು ಸಮಯ ವ್ಯಯಿಸುತ್ತಿದ್ದು, ಇದೇ ವರ್ಷ ಈ ಸಿನಿಮಾ ಬಿಡುಗಡೆ ಆದರೆ ಖಂಡಿತ ಗಮನ ಹರಿಸಬೇಕಾದ ಚಿತ್ರ ಇದಾಗಿದೆ.
ಇದನ್ನೂ ಓದಿ: Cancer Won: ಕ್ಯಾನ್ಸರ್ ಗೆದ್ದ ಶಿವಣ್ಣನ ಭಾವುಕ ಮಾತುಗಳು…
ಧ್ರುವ ಸರ್ಜಾ ನಾಯಕನಾಗಿ ನಟಿಸಿರುವ ಕೆಡಿ ಸಿನಿಮಾ (Dhruv Sarja KD movie)
ಪ್ರೇಮ್ ನಿರ್ದೇಶನ, ಧ್ರುವ ಸರ್ಜಾ (dhruva sarja) ನಾಯಕನಾಗಿ ನಟಿಸಿರುವ ‘ಕೆಡಿ’ ಸಿನಿಮಾ ಈ ವರ್ಷ ಬಿಡುಗಡೆಯಾಗಲಿದ್ದು, ಈ ಸಿನಿಮಾದ ಹಾಡೊಂದು ಇತ್ತೀಚೆಗೆ ಬಿಡುಗಡೆ ಆಗಿದ್ದು, ಗಮನ ಸೆಳೆಯುತ್ತಿದೆ. ‘ಕೆಡಿ’ ಸಿನಿಮಾದಲ್ಲಿ ಹಲವು ತಾರೆಯರು ಒಟ್ಟಿಗೆ ಕೆಲಸ ಮಾಡಿದ್ದಾರೆ.
ಡಾಲಿ ಧನಂಜಯ್, ಶಿವರಾಜ್ ಕುಮಾರ್ ನಟಿಸಿರುವ ಉತ್ತರಕಾಂಡ ಸಿನಿಮಾ
ಡಾಲಿ ಧನಂಜಯ್, ಶಿವರಾಜ್ ಕುಮಾರ್ (Shivaraj Kumar) ನಟಿಸಿರುವ ‘ಉತ್ತರಕಾಂಡ’ ಸಿನಿಮಾ ಸಹ ಕಳೆದ ವರ್ಷವೇ ಬಿಡುಗಡೆ ಆಗಬೇಕಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಈ ಸಿನಿಮಾದ ಬಿಡುಗಡೆ ತಡವಾಗಿದ್ದು, ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿ ಅಭಿಮಾನಿಗಳ ಗಮನ ಸೆಳೆದಿದೆ.
ಸುದೀಪ್ ನಟನೆಯ ಬಿಲ್ಲಾ ರಂಗ ಭಾಷಾ ಸಿನಿಮಾ (Billa Ranga Bhasha starring Sudeep)
ಸುದೀಪ್ (Sudeep) ನಟನೆಯ ‘ಜಿಲ್ಲಾ ರಂಗ ಭಾಷಾ’ ಸಿನಿಮಾ ಇದೇ ವರ್ಷ ಬಿಡುಗಡೆ ಆಗುವ ಸಾಧ್ಯತೆ ಇದೆ. ಸಿನಿಮಾದ ಚಿತ್ರೀಕರಣ ಇನ್ನೂ ಪ್ರಾರಂಭವಾಗಿಲ್ಲವಾದರೂ ಕತೆ ಅಂತಿಮವಾಗಿದೆ ಎನ್ನಲಾಗುತ್ತಿದೆ. ಈ ಸಿನಿಮಾವನ್ನು ಅನೂಪ್ ಭಂಡಾರಿ ನಿರ್ದೇಶನ ಮಾಡುತ್ತಿದ್ದಾರೆ.
ದರ್ಶನ್ ನಟನೆಯ ಡೆವಿಲ್ ಸಿನಿಮಾ (Devil movie Darshan)
ದರ್ಶನ್ (Darshan) ನಟನೆಯ ‘ಡೆವಿಲ್’ ಸಿನಿಮಾ ಕಳೆದ ವರ್ಷವೇ ಅಂದರೆ 2024ರ ಡಿಸೆಂಬರ್‌ನಲ್ಲಿ ಬಿಡುಗಡೆ ಆಗಬೇಕಿತ್ತಾದರೂ, ದರ್ಶನ್ ಜೈಲು ಪಾಲಾದ ಕಾರಣ ಸಿನಿಮಾ ಬಿಡುಗಡೆ ಆಗಲಿಲ್ಲ. ಸದ್ಯ ನಟ ದರ್ಶನ್ ಜಮೀನಿನ ಮೇಲೆ ಬಿರುಗಡೆಯಾಗಿದ್ದು, ಜನವರಿ 15ರ ಬಳಿಕ ಚಿತ್ರೀಕರಣ ಪ್ರಾರಂಭ ಆಗುವ ನಿರೀಕ್ಷೆ ಇದ್ದು, ಇದೇ ವರ್ಷ ಡೆವಿಲ್ ಸಿನಿಮಾ ಬಿಡುಗಡೆ ಆಗುವ ಸಾಧ್ಯತೆಯಿದೆ.
ಶಿವರಾಜ್ ಕುಮಾರ್, ಉಪೇಂದ್ರ ನಟಿಸಿರುವ 45 ಸಿನಿಮಾ
ಶಿವರಾಜ್ ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿರುವ ’45’ ಸಿನಿಮಾ ಪ್ರೇಕ್ಷಕರ ನಿರೀಕ್ಷೆಯ ಚಿತ್ರವಾಗಿದೆ. ಅರ್ಜುನ್ ಜನ್ಯ ಪಾಲಿಗೆ ಇದು ಮೊದಲ ಸಿನಿಮಾ ಆಗಿದ್ದರೂ ಸಹ ಈ ಸಿನಿಮಾಕ್ಕಾಗಿ ಅವರು ಸಾಕಷ್ಟು ಹೋಮ್ ವರ್ಕ್ ಮಾಡಿಕೊಂಡಿದ್ದು, ಸಿನಿಮಾ ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗಿದೆ.