Channapatna by-election : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಬಹುತೇಕ ಅಂತಿಮವಾಗಿದೆ ಎನ್ನಲಾಗುತ್ತಿದೆ.
ಹೌದು, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಚನ್ನಪಟ್ಟಣದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ ಎನ್ನಲಾಗಿದೆ. ಕಾರ್ಯಕರ್ತರ ಒತ್ತಾಯಕ್ಕೆ ಮಣಿದ ಜೆಡಿಎಸ್ ಚನ್ನಪಟ್ಟಣದಿಂದ ನಿಖಿಲ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.
ಈ ಹಿಂದೆ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆ, ರಾಮನಗರ ವಿಧಾನಸಭಾ ಚುನಾವಣೆ ಸೇರಿ ಒಟ್ಟು ಎರಡು ಭಾರೀ ಚುನಾವಣೆಯಲ್ಲಿ ಸೋಲು ಕಂಡಿದ್ದು, ಈಗ ಅವರು ಮತ್ತೆ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆ ಇಳಿದಿದ್ದಾರೆ ಎನ್ನಲಾಗಿದೆ.
ಇನ್ನು, ಚನ್ನಪಟ್ಟಣ ಟಿಕೆಟ್ ಫೈನಲ್ ಕುರಿತು ಮೈತ್ರಿ ಪಕ್ಷಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದ್ದು, ಇಂದು ಸಂಜೆ ಹೊತ್ತಿಗೆ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದ್ದು, ಸಿ ಪಿ ಯೋಗೇಶ್ವರ್ ವಿರುದ್ಧ ಕಣ್ಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.