ಹೈದರಾಬಾದ್: ಆನ್‌ಲೈನ್ ಬೆಟ್ಟಿಂಗ್ ಅನ್ನು ಉತ್ತೇಜಿಸಿದ ಆರೋಪದ ಮೇಲೆ ಮಿಯಾಪುರ ಪೊಲೀಸರು ಟಾಲಿವುಡ್‌ನ ಹಲವಾರು ನಟರು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ರಾಣಾ ದಗ್ಗುಬಟ್ಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ಮಂಚು ಲಕ್ಷ್ಮಿ, ಪ್ರಣೀತಾ, ನಿಧಿ ಅಗರ್ವಾಲ್ ಮತ್ತು ಇತರ 19 ಸಾಮಾಜಿಕ ಮಾಧ್ಯಮ ಪ್ರಭಾವಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಮಾಧ್ಯಮ ಪ್ರಚಾರಗಳು ಮತ್ತು ಪಾಪ್-ಅಪ್ ಜಾಹೀರಾತುಗಳ ಮೂಲಕ ಹಲವಾರು ಸೆಲೆಬ್ರಿಟಿಗಳು ಮತ್ತು ಪ್ರಭಾವಿಗಳು ಜೂಜಾಟದ ವೇದಿಕೆಗಳಲ್ಲಿ ಹೂಡಿಕೆ ಮಾಡಲು ಜನರನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಆರೋಪಿಸಿ ಮಿಯಾಪುರದ 32 ವರ್ಷದ ಉದ್ಯಮಿ ಪಿ.ಎಂ. ಫಣೀಂದ್ರ ಶರ್ಮಾ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಇನ್ನೂ ಪೊಲೀಸರು ಸೆಕ್ಷನ್ 318(4), 112 r/w 49 BNS, 3, 3(A), 4 TSGA, ಮತ್ತು 66 D ITA – 2000 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.