ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿ ಪವಿತ್ರಾ ಗೌಡ ಕೋರ್ಟ್ಗೆ ಹಾಜರಾಗಿದ್ದಾರೆ. ಆದರೆ, A2 ಆರೋಪಿ ನಟ ದರ್ಶನ್ ಕೋರ್ಟ್ಗೆ ಗೈರಾಗಿದ್ದಾರೆ.
ದರ್ಶನ್ ಬೆನ್ನು ನೋವಿನ ತೊಂದರೆಯಿಂದಾಗಿ ಕೋರ್ಟ್ಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ. 57ನೇ ಸಿಸಿಹೆಚ್ ಕೋರ್ಟ್ಗೆ ಬರಬೇಕಿದ್ದ ಅವರು ಈ ಸಲ ಗೈರಾಗಿದ್ದಾರೆ. ಇದೇ ಪ್ರಕರಣದಲ್ಲಿ ಪವಿತ್ರಾ ಗೌಡ ಮತ್ತು ನಂದೀಶ್ ಸೇರಿದಂತೆ ಹಲವು ಆರೋಪಿಗಳು ಕೋರ್ಟ್ನಲ್ಲಿ ಹಾಜರಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ನಂತರ ಕೋರ್ಟ್ ಎಲ್ಲರಿಗೂ ಷರತ್ತುಬದ್ಧ ಜಾಮೀನು ನೀಡಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.