ಬಹು ತಾರಾಂಗಣವಿರುವ ನಿರ್ದೇಶಕ ಮಣಿರತ್ನಂ ಅವರ ನಿರ್ದೇಶನದ ‘ಪೊನ್ನಿಯನ್ ಸೆಲ್ವನ್-1’ ಚಿತ್ರ ಬಾಕ್ಸ್ ಆಫೀಸಿನಲ್ಲಿ ಧೂಳೆಬ್ಬಿಸಿದ್ದು, ಬಿಡುಗಡೆಯಾಗಿ ಮೂರೇ ದಿನಕ್ಕೆ ವಿಶ್ವಸಾದ್ಯಂತ 230ಕೋಟಿ ರೂ ಗಡಿ ದಾಟಿದೆ.
ಹೌದು, ಸೆಪ್ಟೆಂಬರ್ 30 ರಂದು ಜಗತ್ತಿನಾದ್ಯಂತ ಪಂಚಭಾಷೆಗಳಲ್ಲಿ ರಿಲೀಸ್ ಆಗಿ ಬಿಡುಗಡೆಯಾಗದ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ಮೂರೇ ದಿನಕ್ಕೆ ವಿಶ್ವದಾತ್ಯಂತ 230ಕೋಟಿ ರೂ ಗಡಿ ದಾಟಿದ್ದು, ಇಂದು 250 ಕೋಟಿ ರೂ ಗಡಿ ದಾಟಬಹುದು ಎಂದು ಅಂದಾಜಿಸಲಾಗಿದೆ.
‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ಕಾದಂಬರಿಕಾರ ಕಲ್ಕಿ ಕೃಷ್ಣಮೂರ್ತಿ ಅವರ ಪುಸ್ತಕ ಆಧಾರಿತ ಕಥೆಯಾಗಿದ್ದು, ಖ್ಯಾತ ನಿರ್ದೇಶಕ ಮಣಿರತ್ನಂ ಅವರು ನಿರ್ದೇಶನ ಮಾಡಿದ್ದು, ಎ ಆರ್ ರೆಹಮಾನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಇನ್ನು, ಈ ಚಿತ್ರದಲ್ಲಿ ಬಹು ತಾರಾಂಗಣವಿದ್ದು, ಐಶ್ವರ್ಯ ರೈ, ಚಿಯಾನ್ ವಿಕ್ರಂ, ಕಾರ್ತಿ, ತ್ರಿಷಾ, ಜಯಂ ರವಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.