ಬೆಂಗಳೂರು: ಕನ್ನಡ ಚಿತ್ರರಂಗದ ವರನಟ ಡಾ: ರಾಜಕುಮಾರ್ ಕುಟುಂಬದ ಕುಡಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಚಿತ್ರವನ್ನು ಬಿಡಿಸುತ್ತಿರುವ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಗಂಗನರಸಿಯ ನಾಗರಾಜ್ ಎನ್ನುವ ಯುವಕನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ವಿಡಿಯೋವನ್ನು ಸ್ವತಃ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಕಲೆಗೆ ಬೆಲೆ ಕಟ್ಟೋದಕ್ಕೆ ಆಗಲ್ಲ ನಿಜ, ಆದರೆ ಅಭಿಮಾನಿಗಳ ಪ್ರೀತಿಗೂ ಬೆಲೆ ಕಟ್ಟೋದಕ್ಕೆ ಆಗಲ್ಲ, ಮಾತುಗಳಲ್ಲಿ ಅಂತೂ ಏನು ಹೇಳೋದಕ್ಕೆ ಆಗಲ್ಲ. ತುಂಬಾ ತುಂಬಾ Thanks ‘ ಅಂತ ಅಭಿಮಾನಿಯೂ ತಮ್ಮ ಭಾವಚಿತ್ರವನ್ನು ಬಿಡಿಸಿರುವ ಕುರಿತು ಅಭಿಮಾನಿಗೆ ತಮ್ಮ ಧನ್ಯವಾದವನ್ನು ತಿಳಿಸಿದ್ದಾರೆ.
ಸದ್ಯ ಪುನೀತ್ ರಾಜ್ ಕುಮಾರ್ ಅವರ ನಟನೆಯ ನಿರ್ದೇಶಕ ಸಂತೋಷ್ ಆನಂದ್ ರಾಮ್ ನಿರ್ದೇಶನದ ಬಹು ನಿರೀಕ್ಷಿತ “ಯುವರತ್ನ” ಸಿನಿಮಾ ಚಿತ್ರೀಕರಣದ ಅಂತದಲ್ಲಿದ್ದು ತೆರೆಗೆ ಬರಲಿ ಸಿದ್ಧವಾಗುತ್ತಿದೆ.
ಕಲೆಗೆ ಬೆಲೆ ಕಟ್ಟೋದಕ್ಕೆ ಆಗಲ್ಲ ನಿಜ, ಆದರೆ ಅಭಿಮಾನಿಗಳ ಪ್ರೀತಿಗೂ ಬೆಲೆ ಕಟ್ಟೋದಕ್ಕೆ ಆಗಲ್ಲ, ಮಾತುಗಳಲ್ಲಿ ಅಂತೂ ಏನು ಹೇಳೋದಕ್ಕೆ ಆಗಲ್ಲ. ತುಂಬಾ ತುಂಬಾ Thanks pic.twitter.com/S0prUhVrbH
— Puneeth Rajkumar (@PuneethRajkumar) October 7, 2020




