ಹೈದರಾಬಾದ್: ಪುಷ್ಪ 2 ಚಿತ್ರದಲ್ಲಿ ಪೊಲೀಸ್ ಅಧಿಕಾರಿಗಳನ್ನು ಅವಮಾನಿಸುವ ದೃಶ್ಯಗಳಿವೆ ಎಂದು ಆರೋಪಿಸಿ ಕಾಂಗ್ರೆಸ್ ಎಂಎಲ್ಸಿ ಚಿಂತಪಾಂಡು ನವೀನ್ ರಾಚಕೊಂಡ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ದಾಖಲಾದ ದೂರಿನಲ್ಲಿ, ಚಲನಚಿತ್ರದಲ್ಲಿನ ನಿರ್ದಿಷ್ಟ ದೃಶ್ಯಗಳನ್ನು ಉಲ್ಲೇಖಿಸಿ, ಪೊಲೀಸ್ ಅಧಿಕಾರಿಗಳನ್ನು ಭ್ರಷ್ಟರು ಎಂದು ಚಿತ್ರಿಸಲಾಗಿದೆ ಎಂದು ಆರೋಪಿಸಲಾಗಿದೆ. ಐಪಿಎಸ್ ಅಧಿಕಾರಿಯೊಬ್ಬರು ಇರುವ ಈಜುಕೊಳದಲ್ಲಿ ನಾಯಕ ಮೂತ್ರ ವಿಸರ್ಜನೆ ಮಾಡುವ ದೃಶ್ಯವನ್ನು ಚಿತ್ರದಲ್ಲಿ ತೋರಿಸಲಾಗಿದೆ, ಇದು ಪೊಲೀಸ್ ಪಡೆಗೆ ಅಗೌರವ ತೋರಿಸುತ್ತದೆ ಎಂದಿದ್ದಾರೆ.
ಈ ದೃಶ್ಯಗಳಲ್ಲಿ ಕೆಲವು ಅವಮಾನಕರವಾಗಿದ್ದು, ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳಲು ಕಾರಣವಾಗಬಹುದು ಎಂದು ಮಲ್ಲಣ್ಣ ಹೇಳಿದ್ದಾರೆ.
ಕೆಲವು ದೃಶ್ಯಗಳನ್ನು ತೆಗೆದುಹಾಕುವಂತೆ ಮತ್ತು ಪುಷ್ಪ 2 ಚಿತ್ರದ ನಟರು, ನಿರ್ದೇಶಕ ಮತ್ತು ನಿರ್ಮಾಪಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಂಎಲ್ಸಿ ಪೊಲೀಸರಿಗೆ ಒತ್ತಾಯಿಸಿದ್ದಾರೆ.