ಮುಂಬೈ : ದಕ್ಷಿಣದ ಭಾರತದ ಚಿತ್ರರಂಗದ ಟಾಪ್ ಹೀರೋಯಿನ್ ಆಗಿ ಬೆಳೆದ ನಟಿ ರಕುಲ್ ಪ್ರೀತ್ ಸಿಂಗ್ ಈಗ ಬಾಲಿವುಡ್ ನಲ್ಲಿ ತನ್ನ ಪ್ರತಿಭೆಯನ್ನು ಪರೀಕ್ಷಿಸಿಕೊಳ್ಳಲು ಮುಂದಾಗಿದ್ದು, ಬಾಲಿವುಡ್ ಸೂಪರ್ ಸ್ಟಾರ್ ಬಿಗ್ ಬಿ ಅಮಿತಾಬ್ ಬಚ್ಚನ್ ಮತ್ತು ಅಜಯ್ ದೇವ್‌ಗನ್ ಅವರ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಮೇಡೇ’ ಸಿನಿಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
ಇತ್ತೀಚಿಗೆ ನಟಿ ರಾಕುಲ್ ಪ್ರೀತ್ ಸಿಂಗ್ ಅವರ ಹೆಸರು ಬಾಲಿವುಡ್ ಡ್ರಗ್ಸ್ ಪ್ರಕರಣದಲ್ಲಿ ಕೇಳಿಬಂದಿದ್ದು, ಎನ್‌ಸಿಬಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದರು.
ಈಗ ಇತ್ತೀಚಿನ ಮಾಹಿತಿಯ ಪ್ರಕಾರ, ರಕುಲ್ ಬಂಪರ್ ಆಫರ್ ವೊಂದನ್ನು ಹೊಡೆದಿದ್ದಾರೆ. ಕೆಲವು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದರು, ರಕುಲ್ ಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿರಲಿಲ್ಲ. ಈಗ ಅಮಿತಾಬ್ ಬಚ್ಚನ್ ಮತ್ತು ಅಜಯ್ ದೇವ್‌ಗನ್ ಅಭಿನಯದ ಮುಂಬರುವ ‘ಮೇಡೇ’ ಚಿತ್ರದಲ್ಲಿ ರಕುಲ್ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
ಬಹಳ ದಿನಗಳ ನಂತರ ಬಿಗ್ ಬಿ ಮತ್ತು ಅಜಯ್ ಜೊತೆಯಾಗಿ ನಟಿಸುತ್ತಿದ್ದು ಈ ಸಿನಿಮಾ ಬಹಳ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾವನ್ನು ಸ್ವತಃ ನಟ ಅಜಯ್ ದೇವಗನ್ ನಿರ್ದೇಶನ ಮಾಡುತ್ತಿದ್ದು ವಿಶೇಷವೆನಿಸಿದೆ. ಈ ಚಿತ್ರದ ಚಿತ್ರೀಕರಣ ಡಿಸೆಂಬರ್‌ನಲ್ಲಿ ಹೈದರಾಬಾದ್‌ನಲ್ಲಿ ಪ್ರಾರಂಭವಾಗಲಿದೆ.